ಉಡುಪಿ: ಜಿಲ್ಲೆಯಲ್ಲಿ 345 ಸರ್ಕಾರಿ ಕಚೇರಿಗಳು ಹಾಗೂ 444 ಖಾಸಗಿ ಕಚೇರಿಗಳಲ್ಲಿ ಒಟ್ಟು 789 ಆಂತರಿಕ ದೂರು ಸಮಿತಿಗಳು ರಚನೆಯಾಗಿವೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಶಿ ಬಾಕ್ಸ್ ಪೋರ್ಟಲ್ನಲ್ಲಿ 346 ಸಮಿತಿಯ ಮಾಹಿತಿಯನ್ನು ನಮೂದಿಸಲಾಗಿದೆ. ಬಾಕಿ ಉಳಿದಿರುವ 443 ಸಮಿತಿಗಳ ಮಾಹಿತಿಯನ್ನು ಇಂಡೀಕರಿಸಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ -2013 ಕೇವಲ ಕಾಗದಕ್ಕೆ ಸೀಮಿತವಾಗದೇ ಅನುಷ್ಠಾನ ಕಾರ್ಯವು ಸರಿಯಾದ ರೀತಿಯಲ್ಲಿ ಆಗಬೇಕು ಎಂದರು.

ಉದ್ಯೋಗಸ್ಥ ಮಹಿಳೆಯರು ತಾವು ಕಾರ್ಯ ನಿರ್ವಹಿಸುತ್ತಿರುವ ಜಾಗದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದಲ್ಲಿ ದೂರು ನೀಡಲು ಅನುಕೂಲವಾಗುವಂತೆ, ಸರ್ಕಾರದ ಆದೇಶದಂತೆ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ಸಮಿತಿಯು ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು ಎಂದು ಸೂಚಿಸಿದರು.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮಹಿಳೆಯರು ಹೋದಾಗ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರುಗಳು ಕೇಳಿ ಬರುತ್ತಿವೆ. ಜಿಲ್ಲೆಯಲ್ಲಿ ಕೆಲವು ಮಹಿಳೆಯರ ಮೇಲೆ ಎಫ್ಐಆರ್ ಆಗಿರುವುದು ಕಂಡು ಬಂದಿದೆ. ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವುದರೊಂದಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರಕುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ವಿಶೇಷಚೇತನ ಶಾಲೆಗಳಲ್ಲಿ ವಿಶೇಷ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ಗೌರವಧನ ಸಿಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಅದಕ್ಕೆ ಕೂಡಲೇ ಸ್ಪಂದಿಸಬೇಕು. ಅಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕಿಯರಿಗೆ ಋತು ಚಕ್ರ ರಜೆ, ಹೆರಿಗೆ ರಜೆ ಸೌಲಭ್ಯ ಸೇರಿದಂತೆ ನಿಯಮಾನುಸಾರ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ರಾಜ್ಯ ಮಹಿಳಾ ಆಯೋಗದಲ್ಲಿ ದಾಖಲಾಗಿರುವ ಸುಮಾರು 54 ಪ್ರಕರಣಗಳ ವಿಚಾರಣೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿದರು.

ಆಯೋಗದ ಕಾರ್ಯದರ್ಶಿ ರೂಪ ಆರ್., ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-199124942

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.