ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಈಚೆಗೆ ಅಗಲಿದ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ ಪತ್ರಕರ್ತರಿಗೆ ಮಾದರಿಯಾಗಿದೆ ಎಂದು ಹೇಳಿದರು.

ಮನೋವೈದ್ಯ ಡಾ. ಪಿ.ವಿ. ಭಂಡಾರಿ ಮಾತನಾಡಿ, ಗಣೇಶ್ ಪ್ರಭು ಯಾವುದೇ ಮುಲಾಜಿಲ್ಲದೆ ನೇರವಾಗಿ ಮಾತನಾಡುತ್ತಿದ್ದರು. ಅದರಿಂದ ಕೆಲವರು ಅವರನ್ನು ಇಷ್ಟಪಡುತ್ತಿರಲಿಲ್ಲ. ಅವರು ಯಾರಿಗೂ ಹೆದರದೇ ಎಲ್ಲವನ್ನೂ ನೇರವಾಗಿ ಪ್ರಶ್ನಿಸುತ್ತಿದ್ದರು ಎಂದರು.

ಚಿಂತಕ ಪ್ರೊ. ಫಣಿರಾಜ್ ಮಾತನಾಡಿ, ಗಣೇಶ್ ಪ್ರಭು ಯಾವುದೇ ಪಕ್ಷಕ್ಕೂ ಬದ್ಧರಾಗಿರದೆ, ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳಿಗೆ ಮಾತ್ರ ಬದ್ಧರಾಗಿದ್ದರು ಎಂದು ತಿಳಿಸಿದರು.

ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ, ಮಣಿಪಾಲ ಗಾಂಧಿಯನ್ ಸೆಂಟರ್ ಫಾರ್ ಫಿಲೋಸೋಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸ್ನ ಮಾಜಿ ನಿರ್ದೇಶಕ ವರದೇಶ್ ಹೀರೆಗಂಗೆ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ, ಮಾಜಿ ಅಧ್ಯಕ್ಷ ಗೋಕುಲ್ದಾಸ್ ಪೈ, ದಿನೇಶ್ ಕಿಣಿ, ರಾಜೇಶ್ ಶೆಟ್ಟಿ, ನುಡಿನಮನ ಸಲ್ಲಿಸಿದರು.

ಪತ್ರಕರ್ತರಾದ ಹರ್ಷರಾಜ್, ಬಿ.ಬಿ. ಶೆಟ್ಟಿಗಾರ್, ಕಿರಣ್ ಮಂಜನಬೈಲು, ಶಶಿಧರ್ ಮಾಸ್ತಿಬೈಲು, ಸಿಐಟಿಯು ಮುಖಂಡ ಕವಿರಾಜ್ ಎಸ್. ಕಾಂಚನ್, ದಸಂಸ ಮುಖಂಡರಾದ ಮಂಜುನಾಥ್ ಗಿಳಿಯಾರು, ಶ್ಯಾಮ್ರಾಜ್ ಬಿರ್ತಿ, ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಇದ್ದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ವಂದಿಸಿದರು. ರಹೀಂ ಉಜಿರೆ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-1526336938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.