ಉಡುಪಿ: ಕಲ್ಯಾಣಪುರ– ಸಂತೆಕಟ್ಟೆಯ ಅಂಡರ್ ಪಾಸ್ನ ಮಧ್ಯದಲ್ಲಿ ನಿರ್ಮಿಸಿರುವ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಸೋಮವಾರ ಮುಕ್ತಗೊಳಿಸಲಾಯಿತು.

ಸಂತೆಕಟ್ಟೆಯ ಅಂಡರ್ ಪಾಸ್ಗೆ ಸೋಮವಾರ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಘೋಷಿಸಿದರು.

ಅಂಡರ್ಪಾಸ್ನ ಬಾಕಿ ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಕೋಟ ತಿಳಿಸಿದರು.

‘ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ 2022ರಲ್ಲಿ ಆರಂಭವಾಗಿದ್ದು, ಕಾಮಗಾರಿ ಸ್ಥಳದಲ್ಲಿ ಎರಡು ಬೃಹತ್ ಗಾತ್ರದ ಬಂಡೆಗಳು ಸಿಕ್ಕಿದ ಕಾರಣ ಅದನ್ನು ಒಡೆಯಬಾರದು ಎಂದು ಅಕ್ಕಪಕ್ಕದವರು ತಡೆಯಾಜ್ಞೆ ತಂದಿದ್ದರು. ಈ ಕಾರಣಕ್ಕೆ ಕಾಮಗಾರಿ ವಿಳಂಬವಾಗಿದೆ’ ಎಂದು ಅವರು ವಿವರಿಸಿದರು.

‘ಅಂಡರ್ಪಾಸ್ಗೆ ಸಂಬಂಧಿಸಿದ ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇದ್ದು, ಮಳೆಗಾಲದೊಳಗೆ ಅದನ್ನು ಪೂರ್ಣಗೊಳಿಸಲಾಗುವುದು. ಈಗ ತುರ್ತಾಗಿ ಜನರಿಗೆ ಅನುಕೂಲವಾಗಲು ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ’ ಎಂದರು.

‘ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ಪಾಸ್ ಕಾಮಗಾರಿ ಸ್ಥಳದಲ್ಲಿ ಒಂದು ಬದಿಯ ರಸ್ತೆಯನ್ನು 15 ದಿನಗಳೊಳಗೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಅನಂತರ ಎರಡನೇ ಹಂತದ ಕಾಮಗಾರಿ ನಡೆಯಲಿದೆ’ ಎಂದು ಸಂಸದರು ತಿಳಿಸಿದರು.

‘ಕರಾವಳಿ ಬೈಪಾಸ್ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಮರಗಳ ಮತ್ತು ವಿದ್ಯುತ್ ಕಂಬಗಳ ತೆರವು ಕಾರ್ಯ ಈಗಾಗಲೇ ನಡೆದಿದೆ. ಕೆಲವರಿಗೆ ಪರಿಹಾರ ನೀಡುವುದು ಬಾಕಿ ಇತ್ತು. ಅದಷ್ಟು ಶೀಘ್ರ ಸಮಸ್ಯೆಗಳನ್ನು ಪರಿಹರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.

‘ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ಕೆಲವರು ನ್ಯಾಯಾಲಯಕ್ಕೆ ಹೋಗಿರುವುದರಿಂದ ಕಾಮಗಾರಿ ವಿಳಂಬವಾಗಿದೆ. ಕಾನೂನು ತೊಡಕುಗಳನ್ನು ಪರಿಹರಿಸಿ ಅಲ್ಲೂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ’ ತಿಳಿಸಿದರು.

ಸಂತೆಕಟ್ಟೆಯಲ್ಲಿ ಅಂಡರ್ಪಾಸ್ನ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವುದರಿಂದ ಈಗಾಗಲೇ ಅದರಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-28-264067786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.