ಉಡುಪಿ: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಆರೋಪಿ ಬಂಗ್ಲೆಗುಡ್ಡೆಯ ಮಹಮ್ಮದ್ ಫೈಜಲ್ (22) ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಜರುಗಿಸಲು ಆದೇಶ ಹೊರಡಿಸಲಾಗಿದೆ.

ಈತನ ವಿರುದ್ಧ ಕಾರ್ಕಳ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮೂಲಕ ಬಂದ ವರದಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಬಂಧನ ಆದೇಶಕ್ಕಾಗಿ ಮಂಗಳೂರು ಪಶ್ಚಿಮ ವಲಯ ಐಜಿಪಿಗೆ ಸಲ್ಲಿಸಿದ್ದು, ಆತನ ವಿರುದ್ಧ ದಾಖಲಾದ ಪ್ರಕರಣಗಳನ್ನು ಪರಿಶೀಲಿಸಿ ಬಂಧನ ಆದೇಶ ಹೊರಡಿಸಲಾಗಿದೆ. ಅದರಂತೆ ಕಾರ್ಕಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಧಾರವಾಡದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯ ವಿರುದ್ಧ ಒಟ್ಟು 5 ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 2 ಪ್ರಕರಣಗಳಲ್ಲಿ ಸಜೆಯಾಗಿದ್ದು, 2 ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದ್ದು, 1 ಪ್ರಕರಣ ತನಿಖೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-28-206583362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.