ಉಡುಪಿ: ಹನ್ನೆರಡನೇ ಶತಮಾನದಲ್ಲಿ ಶೋಷಣೆ, ಜಾತೀಯತೆ, ಮೇಲು– ಕೀಳು ತಾರತಮ್ಯ, ಅಸ್ಪೃಶ್ಯತೆ ಸೇರಿದಂತೆ ಅನೇಕ ಸಾಮಾಜಿಕ ಅಸಮಾನತೆಗೆ ಒಳಗಾಗಿದ್ದ ಜನರ ಬದುಕಿಗೆ ಆಶಾ ಕಿರಣವಾಗಿ ಸಮಾಜದ ಏಳಿಗೆಗೆ ಶ್ರಮಿಸಿದ ಮಾಚಿದೇವ ಅವರ ಆದರ್ಶಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಇಲ್ಲಿನ ಅಂಬಾಗಿಲು ಗುರು ಮಾಚೀದೇವ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಜಕ ಯಾನೆ ಮಡಿವಾಳ ಸಂಘದ ಸಹಯೋಗದಲ್ಲಿ ಭಾನುವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶರಣರು, ಸಂತರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಡಾ. ಶಿವರಾಮ ಕಾರಂತ ಟ್ರಸ್ಟ್ ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣದಲ್ಲಿ ನಡೆದ ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಹೋರಾಡಿದ ಶರಣರು ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ್ದಾರೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಡಿವಾಳ ಮಾಚಿದೇವ ಅವರು ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ವಚನ ಸಾಹಿತ್ಯವನ್ನು ರಕ್ಷಿಸಿ, ಉಳಿಸಲು ಸಹಕರಿಸಿದ್ದರು ಎಂದು ಹೇಳಿದರು.

ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಸಮುದಾಯದ ಪದಾಧಿಕಾರಿಗಳು ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿದರು. ಸಿಬ್ಬಂದಿ ವರ್ಷ ಬಿ. ಕೋಟ್ಯಾನ್ ನಿರೂಪಿಸಿದರು. ರಜಕ ಯಾನೆ ಮಡಿವಾಳ ಸಂಘದ ಜಿಲ್ಲಾ ಅಧ್ಯಕ್ಷ ಪ್ರದೀಪ್ ಮಡಿವಾಳ ಹೆರ್ಗ ವಂದಿಸಿದರು.

ಶರಣರು ವಚನ ಸಾಹಿತ್ಯದಲ್ಲಿ ತಮ್ಮ ಅನುಭವಗಳನ್ನು ಮನ ಮುಟ್ಟುವ ಹಾಗೆ ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ನೀಡಿದ್ದಾರೆ
ಎಂ.ಎ.ಗಫೂರ್ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ

‘ಸಮಾಜದ ಕಂದಾಚಾರ ತಿದ್ದಿದವರು’

ಕಾರ್ಕಳ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲ್ಲೂಕು ಆಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ಮಹಿಳಾ ಆಯೋಗ ನಿಕಟಪೂರ್ವ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಮಾತನಾಡಿ ಮಡಿವಾಳ ಗುರು ಮಾಚಿದೇವ ಅವರು ಸಮಾಜದ ಕಂದಾಚಾರಗಳನ್ನು ತಿದ್ದುವ ಮೂಲಕ ಮಾರ್ಗದರ್ಶನ ನೀಡಿದ ಮಹಾನ್ ವ್ಯಕ್ತಿ ಎಂದರು. ತಹಶೀಲ್ದಾರ್ ಪ್ರದೀಪ ಆರ್. ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಮಡಿವಾಳ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ್ ಮಡಿವಾಳ ಭಾಗವಹಿಸಿದ್ದರು. ಅಜೆಕಾರು ಕಂದಾಯ ನಿರೀಕ್ಷಕ ರಿಯಾಜ್ ಅಹ್ಮದ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.