ಉಡುಪಿ: ಲೋಕ ಕಲ್ಯಾಣದ ಆಶಯದೊಂದಿಗೆ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಂತ್ರ ಜಪಯಜ್ಞ ಆರಂಭಿಸಲಾಗುತ್ತಿದ್ದು, ಮೇ 10 ರಂದು ಅದಕ್ಕೆ ಚಾಲನೆ ನೀಡಲಾಗುವುದು ಎಂದು ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಅಂದು ಸಂಜೆ 5 ಗಂಟೆಗೆ ಬೆಂಗಳೂರಿನ ಇಸ್ಕಾನ್ ಸಂಸ್ಥೆಯ ಚಂಚಲಪತಿದಾಸ್ ಅವರು ಈ ಯೋಜನೆಯ ವೆಬ್ಸೈಟ್ ಉದ್ಘಾಟಿಸುವರು ಎಂದು ಹೇಳಿದರು.

ಕೇವಲ ಮಂತ್ರ ಜಪ ಮಾತ್ರವಲ್ಲದೆ, ಭಕ್ತರು ಆ ಸಮಯದಲ್ಲಿ ತಮ್ಮಲ್ಲಿರುವ ಯಾವುದಾದರೂ ಒಂದು ದುಶ್ಚಟವನ್ನು ತ್ಯಾಗ ಮಾಡುವ ಸಂಕಲ್ಪ ಮಾಡಬೇಕು. ಆ ಮೂಲಕ ಆಧ್ಯಾತ್ಮಿಕ ಶಕ್ತಿಯೊಂದಿಗೆ ಸಮಾಜದಲ್ಲಿ ಸದ್ವರ್ತನೆಯನ್ನು ಬೆಳೆಸುವುದು ನಮ್ಮ ಆಶಯವಾಗಿದೆ ಎಂದರು.

ಮಠದ ದಿವಾನ ಉದಯ ಸರಳತ್ತಾಯ ಮಾತನಾಡಿ, ಕೃಷ್ಣಮಂತ್ರ ಜಪವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಬೇಕು. ಮಂತ್ರಜಪ ಲೇಖನ ಪುಸ್ತಕವನ್ನು ಮಠದಿಂದಲೇ ಒದಗಿಸಲಾಗುವುದು ಎಂದು ಹೇಳಿದರು.

ಮಠಕ್ಕೆ ಬರುವ ಭಕ್ತರು ಮಳೆ ಮತ್ತು ಬಿಸಿಲಿನಿಂದ ತೊಂದರೆ ಅನುಭವಿಸಬಾರದು ಎಂಬ ದೃಷ್ಟಿಯಿಂದ ಸುಸಜ್ಜಿತ ದರ್ಶನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.

ವಿಶೇಷ ದರ್ಶನಕ್ಕೆ ಪಾಸ್ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಪಾಸ್ಗೆ ₹300 ನಿಗದಿ ಮಾಡಲಾಗಿದೆ. ನಿತ್ಯ ಬರುವ ಸ್ಥಳೀಯ ಭಕ್ತರಿಗೆ ಪ್ರತ್ಯೇಕ ಪಾಸ್ ನೀಡಲಾಗುವುದು. ಅದನ್ನು ಬಳಸಿ ನಿತ್ಯ ಕೃಷ್ಣ ದರ್ಶನ ಮಾಡಬಹುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-1551975324

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.