ಕುಂದಾಪುರ: ಉಡುಪಿ ಜಿಲ್ಲಾಡಳಿತ ಮತ್ತು ಕೌಶಲಾಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಯಾವುದೇ ಕಂಪನಿಯಲ್ಲಿ ಉದ್ಯೋಗ ದೊರೆತರೂ ಶ್ರದ್ಧೆ, ಬದ್ಧತೆ ಮತ್ತು ಆಸಕ್ತಿಯಿಂದ ಜವಾಬ್ದಾರಿ ನಿಭಾಯಿಸಿದರೆ ಯಶಸ್ಸು ದೊರೆಯುತ್ತದೆ. ಶಿಕ್ಷಣ ಪೂರೈಸಿದ ಯುವಜನರಿಗೆ ಉದ್ಯೋಗ ಮೇಳಗಳು ಅನುಕೂಲಕರ ಎಂದರು.

ಶಾಸಕ ಗುರುರಾಜ್ ಗಂಟಿಹೊಳೆ, 89 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ ಎಂದರು. ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಕೆ ಶಾಂತಾರಾಮ ಪ್ರಭು, ಕಾರ್ಯದರ್ಶಿ ಯು.ಎಸ್ ಶೆಣೈ, ಪದವಿ ಕಾಲೇಜು ಪ್ರಾಂಶುಪಾಲ ಶುಭಾಕರಾಚಾರಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜಿ.ಎಂ ಗೊಂಡ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಯೋಜನಾ ನಿರ್ದೇಶಕ ವಿಜಯ್ ಕುಮಾರ, ಕುಂದಾಪುರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕೆ.ಜಿ, ಬೈಂದೂರು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಮದಾಸ್, ತಾಲ್ಲೂಕು ಸಂಜೀವಿನಿ ಒಕ್ಕೂಟದ ಕೋಶಾಧಿಕಾರಿ ಮೈತ್ರಿ ಭಟ್, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಸತೀಶ್ ವಡ್ಡರ್ಸೆ, ರೆಡಿಯೋ ಕುಂದಾಪ್ರ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-28-682485896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.