ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ ತಡೆ: ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಎಸ್.ಅಂಗಾರ ಸೂಚನೆ

Last Updated 17 ಮೇ 2022, 4:21 IST
ಅಕ್ಷರ ಗಾತ್ರ

ಕುಂದಾಪುರ: ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗಿ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು.

ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್‌ ಪ್ರದೇಶದ ಮನೆಗಳಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು. ‘ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಈ ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರತಿ ಮನೆಗಳಿಗೆ ಭೇಟಿ ನೀಡಿ, ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮತ್ತು ನೀರು ಶೇಖರಣೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಡೆಂಗಿ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಬೇಕು’ ಎಂದರು.

ಸೊಳ್ಳೆ ಕಡಿತದಿಂದ ಪಾರಾಗಲು ಅಗತ್ಯವಿರುವ ಸೊಳ್ಳೆ ಪರದೆ ಮತ್ತು ಡಿಎಂಪಿ ತೈಲವನ್ನು ನೀಡುವಂತೆ ಹಾಗೂ ನಿರಂತರವಾಗಿ ಫಾಗಿಂಗ್ ಮಾಡುವಂತೆ ಸೂಚಿಸಿದರು. ಇನ್ನೂ ಹೆಚ್ಚಿನ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿ ಜತೆ ಚರ್ಚಿಸ ಲಾಗುವುದು ಎಂದು ಹೇಳಿದರು.

60 ಹಾಸಿಗೆಗಳ ವಿಶೇಷ ವಾರ್ಡ್: ಕೊಲ್ಲೂರು, ಮುದೂರು ಮತ್ತು ಜಡ್ಕಲ್‌ನಲ್ಲಿ ಜನವರಿಯಿಂದ ನಿರಂತರವಾಗಿ ಡೆಂಗಿ ಪ್ರಕರಣಗಳು ಕಂಡು ಬರುತ್ತಿದ್ದು, ಇದುವರೆಗೆ 113 ಪ್ರಕರಣಗಳು ವರದಿಯಾಗಿದೆ. ಪ್ರಸ್ತುತ 47 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 18 ವರ್ಷದೊಳಗಿನ 6 ಮಕ್ಕಳು ಇದ್ದಾರೆ. ಚಿಕಿತ್ಸೆಗಾಗಿ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಒಟ್ಟು 60 ಹಾಸಿಗೆಗಳ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಡ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ ಶೆಟ್ಟಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಕುಂದಾಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT