ಉಡುಪಿ: ಕುಂದಾಪುರ ತಾಲ್ಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದು ಕಾಣಿಕೆ ಹುಂಡಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಮುತ್ತಪ್ಪ ಶರಣಪ್ಪ ವಾಲಿಕಾರ(40) ಬಂಧಿತ ಆರೋಪಿಗಳು.

ಏ.20ರಂದು ಬೆಳಿಗ್ಗೆ ಹೆಲ್ಮೆಟ್ ಧರಿಸಿ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಬಂಧಿಸಿ, ಕೃತಕ್ಕೆ ಬಳಸಿದ ಬೈಕ್ ಹಾಗೂ ಮೂರು ಮೊಬೈಲ್ ಫೋನ್ ಮತ್ತು ದೇವಸ್ಥಾನದ ಹುಂಡಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-880441924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.