ಉಡುಪಿ: ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆ ಕುರಿತು ಅಧಿಸೂಚನೆ ಪತ್ರ ಬಿಡುಗಡೆಗೊಳಿಸಿದ್ದನ್ನು ವಿರೋಧಿಸಿ ನಗರದ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಸಿಐಟಿಯು ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಬುಧವಾರ ಅಧಿಸೂಚನೆ ಪತ್ರದ ಪ್ರತಿಯನ್ನು ಸುಟ್ಟು ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಶಶಿಧರ್ ಗೊಲ್ಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಮಾತನಾಡಿದರು.

ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಸುಭಾಷ್ ನಾಯಕ್, ಮುಖಂಡರಾದ ಸೈಯದ್, ಮುರಳಿ , ಜನರಲ್ ವರ್ಕರ್ಸ್ ಯೂನಿಯನ್ ಕಾರ್ಯದರ್ಶಿ ರಮೇಶ್, ಬೀಡಿ ಆ್ಯಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಕಾರ್ಯದರ್ಶಿ ಉಮೇಶ್ ಕುಂದರ್, ಸರೋಜ ಎಸ್., ಶಾರದ, ನಾಗೇಶ್, ವಿಶ್ವನಾಥ ಉಪಸ್ಥಿತರಿದ್ದರು.

ಸಿಐಟಿಯು ಉಡುಪಿ ವಲಯ ಸಂಚಾಲಕ ಕವಿರಾಜ್. ಎಸ್.ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ: ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿ ರೂಪಿಸಿ, ಜಾರಿಗೆ ತರುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿರುವುದು ಖಂಡನೀಯ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಇಲ್ಲಿನ ಶಾಸ್ತ್ರಿ ವೃತ್ತದ ಬಳಿ ಶ್ರಮ ಸಂಹಿತೆಯ ಅಧಿಸೂಚನೆಯ ಕರಡು ಪ್ರತಿ ದಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇಶದಾದ್ಯಂತ ಕಾರ್ಮಿಕರು, ಕಾರ್ಮಿಕ ಸಂಘಟನೆಗಳು ಇದನ್ನು ವಿರೋಧಿಸುತ್ತಿದ್ದರೂ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ಶ್ರಮ ಸಂಹಿತೆ ಜಾರಿಗೆ ತರಲು ಹೊರಟಿರುವುದು ದುರಂತ. ಕೇಂದ್ರ ಸರ್ಕಾರದ ಈ ನಿಲುವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ವಿ ಮಾತನಾಡಿದರು. ಸಿಐಟಿಯು ಮುಖಂಡರಾದ ಎಚ್. ನರಸಿಂಹ, ಮಹಾಬಲ ವಡೇರಹೋಬಳಿ, ಬಲ್ಕಿಸ್ ಬಾನು, ಸುರೇಂದ್ರ, ಕಟ್ಟಡ ಕಾರ್ಮಿಕ ಸಂಘಟನೆಯ ಮುಖಂಡರಾದ ಶಶಿಕಾಂತ್, ಸುಧೀರ್, ರಾಜ ಬಿಟಿಆರ್, ರೆಹಮಾನ್, ಆಟೊ ಸಂಘಟನೆಯ ರಾಜು ದೇವಾಡಿಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-94570300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.