ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಿಸಲಿ: ಯದುವೀರ್

Published : 29 ಸೆಪ್ಟೆಂಬರ್ 2024, 8:19 IST
Last Updated : 29 ಸೆಪ್ಟೆಂಬರ್ 2024, 8:19 IST
ಫಾಲೋ ಮಾಡಿ
Comments

ಉಡುಪಿ: ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಪ್ರದೇಶ. ಅದು ತಾಯಿ ಚಾಮುಂಡೇಶ್ವರಿಯ ಆಸ್ತಿ. ನಾವು ಆ ತಾಯಿಯನ್ನು ಮಹಿಷಾಸುರ ಮರ್ದಿನಿ ಎಂದು ನಂಬುತ್ತೇವೆ. ಈ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷಾ ದಸರಾವನ್ನು ಆಚರಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾನೊಬ್ಬ ಜವಾಬ್ದಾರಿಯುತ ಜನಪ್ರತಿನಿಧಿ. ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ. ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು. ಸಾರ್ವಜನಿಕ ಸ್ಥಳಗಳಲ್ಲೂ ಸರ್ಕಾರದಿಂದ ಅನುಮತಿ ಪಡೆದು ಆಚರಣೆ ಮಾಡಬಹುದು. ಆದರೆ ಭಾವನೆಗಳಿಗೆ ಧಕ್ಕೆಯಾಗದಂತೆ ಆಚರಿಸಿದರೆ ಸಂತೋಷ ಎಂದರು.

ಮುಡಾ ಹಗರಣದ ಬಗ್ಗೆ ಬಹಳಷ್ಟು ಚರ್ಚೆಗಳು ನಡೆದಿವೆ. ಈಗಾಗಲೇ ಎಫ್ಐಆರ್ ಕೂಡ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT