ಸೋಮವಾರ, ಮಾರ್ಚ್ 8, 2021
30 °C

ಉಡುಪಿ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಭರ್ಜರಿ ಜಯ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ.

ಉಡುಪಿ ನಗರಸಭೆ, ಕುಂದಾಪುರ ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ ಬಂದಿದೆ. ಕಾರ್ಕಳ ಪುರಸಭೆಯಲ್ಲಿ ಬಿಜೆಪಿ ಕಾಂಗ್ರೆಸ್ ತಲಾ 11 ಸ್ಥಾನಗಳಲ್ಲಿ ಗೆಲುವು ಪಡೆದಿದ್ದು ಒಬ್ಬ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ.

ಉಡುಪಿ ನಗರಸಭೆಯ ಒಟ್ಟು 35 ಕ್ಷೇತ್ರಗಳಲ್ಲಿ ಬಿಜೆಪಿ 31, ಕಾಂಗ್ರೆಸ್ 4 ಸ್ಥಾನಗಳಲ್ಲಿ ಗೆದ್ದಿದೆ. ಕಳೆದಬಾರಿ ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತವಿತ್ತು.

ಕುಂದಾಪುರ ಪುರಸಭೆಯ ಒಟ್ಟು 23 ಸ್ಥಾನಗಳ ಪೈಕಿ ಬಿಜೆಪಿ 14, ಕಾಂಗ್ರೆಸ್ 8 ಸ್ಥಾನಗಳಲ್ಲಿ ಜಯಗಳಿಸಿದೆ. ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ. 

ಸಾಲಿಗ್ರಾಮ ಪಟ್ಟಣ ಪಂಚಾಯ್ತಿಯ ಒಟ್ಟು 16 ಸ್ಥಾನಗಳಲ್ಲಿ ಬಿಜೆಪಿ 10, ಕಾಂಗ್ರೆಸ್ 5 ಹಾಗೂ ಒಬ್ಬರು ಪಕ್ಷೇತರರು ಗೆದ್ದಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು