ಉಡುಪಿ: ತುಳುಕೂಟ ಉಡುಪಿ ಮತ್ತು ವಿಶ್ವಪ್ರಭ ಪ್ರತಿಷ್ಠಾನದ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರಿನ 40ನೇ ವರ್ಷದ ಸಂಭ್ರಮ ಇದೇ 31 ರಂದು ಮಧ್ಯಾಹ್ನ 3.30ಕ್ಕೆ ನಗರದ ಕಿದಿಯೂರು ಹೋಟೆಲ್ನ ಅನಂತಶಯನ ಸಭಾಂಗಣದಲ್ಲಿ ನಡೆಯಲಿದೆ ಎಂದು ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಉದ್ಯಮಿ ಯು.ವಿಶ್ವನಾಥ ಶೆಣೈ ಅವರು ಭಾಗವಹಿಸುವರು. ಮೀರ್ಮಾರ್ ಗೋವಾದ ನಿವೃತ್ತ ಉಪಪ್ರಾಂಶುಪಾಲ ಎಸ್.ಎನ್.ಡಿ.ಪೂಜಾರಿ ಅವರು ಬರೆದಿರುವ ‘ತುಳುವ ದೈವ ಸಂಪ್ರದಾಯ’ ಅಧ್ಯಯನ ಗ್ರಂಥವನ್ನು ಉಡುಪಿ ತುಳುಕೂಟದ ಸ್ಥಾಪಕಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್ ಬಿಡುಗಡೆ ಮಾಡುವರು ಎಂದರು.

ಜಾನಪದ ವಿದ್ವಾಂಸ ಗಣನಾಥ ಎಕ್ಕಾರು ಪುಸ್ತಕ ಪರಿಚಯ ಮಾಡಲಿರುವರು. ಮಧುಶ್ರೀ ಪ್ರಕಾಶನದ ಮುಖ್ಯಸ್ಥ ಗಂಗಾಧರ ಕಿದಿಯೂರು ಅವರು ಬರೆದಿರುವ ‘ಪಿಂಗಾರದ ಬಾಲೆ ಸಿರಿ’ತುಳು ನಾಟಕದ ಇಂಗ್ಲಿಷ್ ಆವೃತ್ತಿಯನ್ನು ಜಾನಪದ ವಿದ್ವಾಂಸ ಗಣೇಶ್ ಅಮಿನ್ ಸಂಕಮಾರ್ ಬಿಡುಗಡೆ ಮಾಡುವರು. ಈ ಕೃತಿಯನ್ನು ಎಸ್.ಎನ್.ಡಿ. ಪೂಜಾರಿ ಅವರು ಇಂಗ್ಲಿಷ್ಗೆ ಅನುವಾದಿಸಿದ್ದಾರೆ ಎಂದು ವಿವರಿಸಿದರು.

ಲೇಖಕಿ ಪಾರ್ವತಿ ಜಿ.ಐತಾಳ್ ಪುಸ್ತಕ ಪರಿಚಯ ಮಾಡಲಿದ್ದಾರೆ. ಇದೇ ವೇಳೆ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಎಲ್. ಸಾಮಗ, ನಿವೃತ್ತ ಶಿಕ್ಷಕಿ ಸರಳಾ ಶೆಟ್ಟಿ, ಧನಲಕ್ಷ್ಮಿ, ಮುತ್ತಕ್ಕ ಅವರಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ವಿವಿಧ ಸಂಘ ಸಂಸ್ಥೆಗಳಿಗೆ ಗೌರವಾರ್ಪಣೆ ನೆರವೇರಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗಂಗಾಧರ ಕಿದಿಯೂರು, ವಿಶ್ವನಾಥ ಶೆಣೈ ಉಡುಪಿ, ಬಿ. ಪ್ರಭಾಕರ ಭಂಡಾರಿ, ಪ್ರಕಾಶ ಸುವರ್ಣ ಕಟಪಾಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-1096593241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.