ಶುಕ್ರವಾರ, ಅಕ್ಟೋಬರ್ 30, 2020
28 °C

ಉಡುಪಿ: ಮಾಳ–ಕುದುರೆಮುಖ ಹೆದ್ದಾರಿ 2 ದಿನ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕಾರ್ಕಳ ತಾಲ್ಲೂಕಿನ ಮಾಳ–ಕುದುರೆಮುಖ ರಾಷ್ಟ್ರೀಯ ಹೆದ್ದಾರಿ 169ರಲ್ಲಿ 2 ದಿನ ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿದ್ದಾರೆ.

ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಾಳ–ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಮಣ್ಣು ರಸ್ತೆಗೆ ಬೀಳುತ್ತಿದೆ. ಬೃಹತ್ ಗಾತ್ರದ ಮರಗಳು ರಸ್ತೆಗೆ ಬಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಾಹನಗಳ ಸಂಚಾರದಿಂದ ಸಾರ್ವಜನಿಕರ ಪ್ರಾಣಕ್ಕೆ ತೊಂದರೆಯಾಗುವ ಸಾದ್ಯತೆ ಹೆಚ್ಚಾಗಿರುವುದರಿಂದ ಸೆ. 21 ಹಾಗೂ 22ರಂದು ಮಾಳ–ಕುದುರೆಮುಖ ಹೆದ್ದಾರಿ ಬಂದ್‌ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು