ಉಡುಪಿ: ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುವ ಮಲ್ಪೆ ಬೀಚ್ನಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ.

ಬೀಚ್ನಲ್ಲಿ ಅಳವಡಿಸಿರುವ ಕಸದ ತೊಟ್ಟಿಗಳು ತುಂಬಿ ತುಳುಕುತ್ತಿದ್ದು, ಸಂಬಂಧಪಟ್ವರು ಸಮರ್ಪಕವಾಗಿ ಕಸ ತೆರವಿಗೆ ಮುಂದಾಗುತ್ತಿಲ್ಲ ಎಂದು ಪ್ರವಾಸಿಗರು ದೂರಿದ್ದಾರೆ.

ಬೀಚ್ನ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಕಸವನ್ನು ಎಸೆಯಲಾಗಿದೆ. ಪ್ರವಾಸಿಗರು ನಡೆದಾಡುವ ಮರಳಿನಲ್ಲೂ ಕೆಲವೆಡೆ ಮದ್ಯದ ಬಾಟಲಿಗಳನ್ನು ಎಸೆಯಲಾಗಿದೆ ಎಂದೂ ಹೇಳಿದ್ದಾರೆ.

ಕಸ ರಾಶಿ ಬಿದ್ದಿರುವುದರಿಂದ ಅದರಲ್ಲಿ ಆಹಾರ ಹುಡುಕಲು ಬೀದಿ ನಾಯಿಗಳು ಬರುತ್ತಿವೆ. ಬೀಚ್ ಪರಿಸರದಲ್ಲಿ ಬೀದಿ ನಾಯಿಗಳ ಹಾವಳಿಯು ಮಿತಿ ಮೀರಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾರಾಂತ್ಯದಲ್ಲಿ ಹಾಗೂ ರಜಾ ದಿನಗಳಲ್ಲಿ ರಾಜ್ಯದ ವಿವಿಧೆಡೆಯ ಪ್ರವಾಸಿಗರು ಹಾಗೂ ಸ್ಥಳೀಯರೂ ಮಲ್ಪೆ ಬೀಚ್ಗೆ ಭೇಟಿ ನೀಡುತ್ತಾರೆ. ಆದರೆ ಅಲ್ಲಿನ ಕಸದ ರಾಶಿಯು ಬೀಚ್ನ ಅಂದಗೆಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-28-1700498367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.