ಉಡುಪಿ: ಮಕ್ಕಳ ಪರೀಕ್ಷೆ ಮುಗಿದು ಬೇಸಿಗೆ ರಜೆ ಆರಂಭವಾದ ಬಳಿಕ ಜಿಲ್ಲೆಯ ಸಮುದ್ರ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಮಲ್ಪೆ ಬೀಚ್ಗೆ ವಾರಾಂತ್ಯದಲ್ಲಿ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಜೊತೆಗೆ ಇತರ ದಿನಗಳಲ್ಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ.

ಬಿಸಿಲಿನ ತೀವ್ರತೆ ಇದ್ದರೂ ಬೆಳಿಗ್ಗೆ, ಮಧ್ಯಾಹ್ನದ ವೇಳೆಯಲ್ಲೂ ಮಲ್ಪೆ ಬೀಚ್ಗೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಸಂಜೆ ವೇಳೆಗೆ ಇನ್ನಷ್ಟು ಪ್ರವಾಸಿಗರು ಬರುತ್ತಾರೆ.

ರಾಜ್ಯದ ವಿವಿಧೆಡೆಗಳಿಂದ ಜಿಲ್ಲೆಯ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರೂ ಮಲ್ಪೆ ಬೀಚ್ಗೆ ಬರುತ್ತಿದ್ದಾರೆ. ಸೇಂಟ್ ಮೇರಿಸ್ ದ್ವೀಪಕ್ಕೂ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿವೆ.

ಸೇಂಟ್ ಮೇರಿಸ್ ದ್ವೀಪಕ್ಕೆ ಮಲ್ಪೆಯ ಸೀವಾಕ್ ಬಳಿಯಿಂದ ದೊಡ್ಡ ಬೋಟ್ಗಳಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋದರೆ. ಮಲ್ಪೆ ಬೀಚ್ನಿಂದಲೂ ಬೋಟ್ಗಳು ಜನರನ್ನು ಕರೆದೊಯ್ಯುತ್ತಿವೆ.

ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವ ಕಾರಣ ಮಲ್ಪೆ ಬೀಚ್ನಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಅಲ್ಲಲ್ಲಿ ಎಚ್ಚರಿಕೆಯ ಫಲಕಗಳನ್ನು ಅಳವಡಿಸಲಾಗಿದೆ. ಪ್ರವಾಸಿಗರು ಸಮುದ್ರದ ಆಳಕ್ಕೆ ತೆರಳದಂತೆ ಜೀವರಕ್ಷಕ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಮೂಲಗಳು ತಿಳಿಸಿವೆ.

ಮಲ್ಪೆ ಬೀಚ್ಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳೂ ಗರಿಗೆದರಿವೆ. ಜೆಟ್ಸ್ಕಿ, ಬನಾನ ಬೋಟ್, ಸ್ಪೀಡ್ ಬೋಟ್ಗಳಲ್ಲಿ ಸಂಚರಿಸಿ ಪ್ರವಾಸಿಗರು ಮೋಜು ಅನುಭವಿಸುತ್ತಿದ್ದಾರೆ. ಬೋಟ್ ಪ್ಯಾರಾ ಸೈಲಿಂಗ್ ಚಟುವಟಿಕೆಯಲ್ಲೂ ಪ್ರವಾಸಿಗರು ಭಾಗಿಯಾಗುತ್ತಿದ್ಧಾರೆ.

ಹದಗೆಟ್ಟ ರಸ್ತೆ: ಮಲ್ಪೆ ಬೀಚ್ಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರೂ ರಸ್ತೆ ವಿಸ್ತರಣೆ ಕಾಮಗಾರಿ ಇನ್ನೂ ಪೂರ್ಣವಾಗದಿರುವುದರಿಂದ ಸಂಕಷ್ಟ ಅನುಭವಿಸಬೇಕಾಗಿದೆ. ಕರಾವಳಿ ಬೈಪಾಸ್ನಿಂದ ಮಲ್ಪೆಗೆ ತೆರಳುವ ರಸ್ತೆಯು ಮಲ್ಪೆ ಸಮೀಪ ತೀರಾ ಹದಗೆಟ್ಟಿದ್ದು ವಾಹನಗಳು ತೆವಳಿಕೊಂಡು ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆ ಹೊಂಡಮಯವಾಗಿರುವುದರಿಂದ ವಾಹನ ಸಮಾರರು ನಿತ್ಯ ಪ್ರಯಾಸ ಪಡಬೇಕಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-28-306080413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.