ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಇದೇ 14ರಿಂದ 17ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.14 ರಂದು ಬೆಳಿಗ್ಗೆ 11 ಗಂಟೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾವು ಮೇಳವನ್ನು ಉದ್ಘಾಟಿಸುವರು. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸುವರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ತೋಟಗಾರಿಕೆ ಇಲಾಖೆಯ ನಿರ್ದೇಶಕ ಇಬ್ರಾಹಿಂ ಮೈಗೂರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ತೋಟಗಾರಿಕೆ ಹೆಚ್ಚುವರಿ ನಿರ್ದೇಶಕ ಎಸ್. ನಂದಾ, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-28-1565855366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.