ಉಡುಪಿ: ದೇಶದ ಪ್ರಗತಿಗೆ ಶಿಕ್ಷಣ ಮತ್ತು ಆರೋಗ್ಯ ಅತ್ಯಗತ್ಯ ಎಂಬುದು ಡಾ. ಟಿ.ಎಂ.ಎ. ಪೈ ಅವರ ದೃಢ ನಂಬಿಕೆಯಾಗಿತ್ತು. ಮಣಿಪಾಲ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಅವರ ಸೇವಾ ಮನೋಭಾವವೇ ಕಾರಣ ಎಂದು ಮಾಹೆ ಟ್ರಸ್ಟ್ ಅಧ್ಯಕ್ಷ ಡಾ. ರಂಜನ್ ಆರ್. ಪೈ ಹೇಳಿದರು.

ಮಣಿಪಾಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥಾಪಕರಾದ ಡಾ. ಟಿ.ಎಂ.ಎ. ಪೈ ಅವರ 128ನೇ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುಣಮಟ್ಟದ ಕಲಿಕೆ, ಹೊಸ ಆವಿಷ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಎತ್ತಿ ಹಿಡಿಯುವ ಮೂಲಕ ಅವರ ಆಶಯವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಸಂಕಲ್ಪವನ್ನು ನಾವು ಮಾಡಿದ್ದೇವೆ ಎಂದರು.

ಮಾಹೆ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಿಕ್ಷಣ ಮತ್ತು ಆರೋಗ್ಯ ತಲುಪಬೇಕು ಎಂದು ಡಾ. ಟಿ.ಎಂ.ಎ. ಪೈ ಅವರು ಕನಸು ಕಂಡಿದ್ದರು. ಅಂದು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಇಂದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.

ಕೇವಲ ಒಂದು ಸಂಸ್ಥೆಯನ್ನು ಕಟ್ಟುವುದಷ್ಟೇ ಅವರ ಗುರಿಯಾಗಿರಲಿಲ್ಲ, ಬದಲಾಗಿ ಒಂದು ಸಮರ್ಥ ಸಮಾಜವನ್ನು ನಿರ್ಮಿಸುವುದು ಅವರ ಉದ್ದೇಶವಾಗಿತ್ತು. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್ ಮಾತನಾಡಿ, ಕೃಷಿ ಭೂಮಿ ಅಥವಾ ಕಾಡನ್ನು ನಾಶಪಡಿಸದೆ, ಬಂಜರು ಭೂಮಿಯಲ್ಲಿ ಶಿಕ್ಷಣ ಸಂಸ್ಥೆಯನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರಕೃತಿ ಮತ್ತು ಮಾನವ ನಿರ್ಮಿತ ಪ್ರಗತಿ ಒಟ್ಟಾಗಿ ಸಾಗಬಹುದು ಎಂಬುದನ್ನು ಡಾ. ಟಿ.ಎಂ.ಎ. ಪೈ ತೋರಿಸಿಕೊಟ್ಟಿದ್ದಾರೆ ಎಂದು ಪ್ರತಿಪಾದಿಸಿದರು.

ಮಣಿಪಾಲ್ ಟ್ರಸ್ಟ್ನ ಟ್ರಸ್ಟಿ ವಸಂತಿ ಆರ್. ಪೈ, ಮಣಿಪಾಲದ ಡಾ. ಟಿ.ಎಂ.ಎ. ಪೈ ಫೌಂಡೇಶನ್ನ ಅಧ್ಯಕ್ಷ ಟಿ. ಅಶೋಕ್ ಪೈ, ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ನ ಕಾರ್ಯನಿರ್ವಾಹಕ ಅಧ್ಯಕ್ಷರು ಟಿ. ಸತೀಶ್ ಯು. ಪೈ ಉಪಸ್ಥಿತರಿದ್ದರು.

ಕುಂದಾಪುರ ಮೋಹನ್ ಮತ್ತು ಲತಾ ಭಂಡಾರ್ಕರ್ ಹಾಗೂ ಕದಂಬಿ ವಿದ್ಯಾರ್ಥಿವೇತನಗಳನ್ನು ವಿತರಿಸಲಾಯಿತು. ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ವಿವಿಧ ವಿಭಾಗಗಳಲ್ಲಿ ಅಗ್ರಸ್ಥಾನ ಪಡೆದ 42 ವಿದ್ಯಾರ್ಥಿಗಳು ಹಾಗೂ 19 ‘ಮಣಿಪಾಲ್ ಸ್ಕಾಲರ್’ಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ನರ್ಸಿಂಗ್, ಅಂಗನವಾಡಿ ಮತ್ತು ಹಾಸ್ಟೆಲ್ ಉಸ್ತುವಾರಿ ವಿಭಾಗಗಳಲ್ಲಿ ಶ್ಲಾಘನೀಯ ಸೇವೆ ನೀಡಿದವರಿಗೆ ಶಾರದಾ ಎಂ. ಪೈ, ಡಾ. ಪದ್ಮಾ ರಾವ್ ಮತ್ತು ಗೀತಾ ಕೆ. ನಾಯಕ್ ಅವರ ಸ್ಮರಣಾರ್ಥ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-77872477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.