ಉಡುಪಿ: ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದ ಹಣ್ಣಿನ ಮರಗಳನ್ನು ಕಡಿದ ಪ್ರಕರಣ ಸಂಬಂಧ ಜಿಲ್ಲಾ ಕಚೇರಿ ಸಂಕೀರ್ಣದ ಕೋರ್ ಕಮಿಟಿಯ ಸದಸ್ಯ ಕಾರ್ಯದರ್ಶಿ ಅವರ ಮೇಲೆ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಅಲ್ಲದೇ ಜಿಲ್ಲಾ ಸಂಕೀರ್ಣ ನಿರ್ವಹಣಾ ಸಮಿತಿಯ ಅಡಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದ ಮರಗಳನ್ನು ಕಡಿದ ಕುರಿತು ಏ.28 ರಂದು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ‘ಡಿ.ಸಿ. ಕಚೇರಿ ಆವರಣದ ಮರಗಳಿಗೆ ಕೊಡಲಿ’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಮರ ಕಡಿದಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

‘ಏ.24ರಂದು ಕಚೇರಿ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದ ಮರದಿಂದ ಮಾವಿನ ಹಣ್ಣು ಕೊಯ್ಯುತ್ತಿದ್ದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದ ಕಾರಣ, ಸ್ಥಳವನ್ನು ಪರಿಶೀಲಿಸಿ, ಮರಗಳಿಗೆ ಯಾವುದೇ ಹಾನಿ ಉಂಟು ಮಾಡದೆ ಹೈಟೆನ್ಷನ್ ತಂತಿಗಳನ್ನು ಮೇಲೇರಿಸಲು ಅಥವಾ ಯುಜಿ ಕೇಬಲ್ಗಳನ್ನು ಅಳವಡಿಸುವ ಸಲುವಾಗಿ ತಗಲುವ ವೆಚ್ಚದ ಕುರಿತು ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಮೆಸ್ಕಾಂಗೆ ನಿರ್ದೇಶನ ನೀಡಲಾಗಿತ್ತು. ಆದರೂ ಏ.27ರಂದು ಮರಗಳನ್ನು ಕಡಿದಿರುವ ಬಗ್ಗೆ ಪತ್ರಿಕಾ ಮಾಧ್ಯಮಗಳ ಮೂಲಕ ತಿಳಿದು ಬಂದಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಜಿಲ್ಲಾ ಸಂಕೀರ್ಣದ ಜವಾಬ್ದಾರಿಯನ್ನು ಹೊಂದಿರುವ ಅಧಿಕಾರಿಯು ಮರಕಡಿತಲೆ ಮಾಡುವ ಯಾವುದೇ ವಿಚಾರವನ್ನು ಜಿಲ್ಲಾಡಳಿತದ ಗಮನಕ್ಕೆ ತಾರದೇ, ಕರ್ತವ್ಯ ಲೋಪ ಎಸಗಿರುವುದು ಗಮನಕ್ಕೆ ಬಂದಿದೆ’ ಎಂದಿದ್ದಾರೆ. ‘ಮರ, ಗಿಡಗಳನ್ನು ಕಡಿಯದಂತೆ ಸ್ಪಷ್ಟ ನಿರ್ದೇಶನ ನೀಡಿದ್ದರೂ ಈ ರೀತಿ ಮರ ಕಡಿದಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-1266367196

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.