ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ಜಿಲ್ಲೆಯ ಅಭಿವೃದ್ಧಿ ಹಿನ್ನೋಟ ಅನಾವರಣ: ಕೆ.ಜಯಪ್ರಕಾಶ್ ಹೆಗ್ಡೆ

ಜಿಲ್ಲಾ ರಜತ ಮಹೋತ್ಸವ ವಿಜೃಂಭಣೆಯ ಆಚರಣೆ
Last Updated 9 ಆಗಸ್ಟ್ 2022, 12:26 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ಜಿಲ್ಲೆ ಅಸ್ಥಿತ್ವಕ್ಕೆ ಬಂದು ಆಗಸ್ಟ್ 25ಕ್ಕೆ 25 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಜಿಲ್ಲೆಯು ಸಾಗಿಬಂದ ಅಭಿವೃದ್ಧಿ ಕಾರ್ಯಗಳ ಪುನರಾವಲೋಕನ ಬಿಂಬಿಸುವ ರಜತ ಮಹೋತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಜತ ಮಹೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಡುಪಿ ಜಿಲ್ಲೆ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಅವಿಭಾಜ್ಯ ಅಂಗವಾಗಿತ್ತು. ಇಲ್ಲಿನ ಜನರು ಕೆಲಸ ಕಾರ್ಯಗಳಿಗೆ ದೂರದ ಜಿಲ್ಲಾ ಕೇಂದ್ರವಾದ ಮಂಗಳೂರಿಗೆ ಹೋಗಿ ಬರುವುದು ಕಷ್ಟದ ಕೆಲಸವಾಗಿತ್ತು. ಉಡುಪಿ ಜಿಲ್ಲೆಯನ್ನು ರಚಿಸಬೇಕು ಎಂಬ ಜನರ ಆಶೋತ್ತರ ಹಾಗೂ ಜನಪ್ರತಿನಿಧಿಗಳ ಪ್ರಯತ್ನ, ಸಂಘ ಸಂಸ್ಥೆಗಳ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಗಳಾದ ಜೆ.ಎಚ್.ಪಟೇಲ್ 1997ರ ಆಗಸ್ಟ್ 25 ರಂದು ಉಡುಪಿ ಜಿಲ್ಲೆ ರಚನೆಗೆ ಹಸಿರು ನಿಶಾನೆ ತೋರುವ ಮೂಲಕ ಜಿಲ್ಲೆ ಅಸ್ಥಿತ್ವಕ್ಕೆ ಬಂತು ಎಂದರು.

ಉಡುಪಿ ಜಿಲ್ಲೆಯು ರಚನೆಯಾಗುವ ಮೊದಲು ಅಭಿವೃದ್ಧಿ ಕಾರ್ಯಗಳು ಅಮೆಗತಿಯಲ್ಲಿ ಸಾಗಿದ್ದವು. ಜಿಲ್ಲೆಯಾದ ಬಳಿಕ ಅಭಿವೃದ್ಧಿಯ ಪರ್ವದತ್ತ ಸಾಗಿದ ಜಿಲ್ಲೆಯು ರಾಜ್ಯದ ಇತರೆ ಜಿಲ್ಲೆಗಳಿಗಿಂತಲೂ ಹೆಚ್ಚಿನ ಅಭಿವೃದ್ಧಿ ಹೊಂದುವ ಮೂಲಕ ಮುಂಚೂಣಿಗೆ ಬಂತು. ಕೇವಲ ಸರ್ಕಾರದ ಕಾರ್ಯಗಳಲ್ಲದೆ ಖಾಸಗಿ ಸೇರಿದಂತೆ ಇತರೆ ಎಲ್ಲಾ ಕ್ಷೇತ್ರದಲ್ಲಿಯೂ ಸಹ ಜಿಲ್ಲೆ ಅಭಿವೃದ್ದಿಯತ್ತ ಸಾಗಿ ಮುನ್ನಡೆಯುತ್ತಿದೆ ಎಂದರು.

ರಜತ ಮಹೋತ್ಸವ ಕಾರ್ಯಕ್ರಮವನ್ನು ಹಿಂದಿನ ದಿನಗಳ ನೆನಪಿನೊಂದಿಗೆ ಮುಂದೆ ಹೋಗಬೇಕೆಂಬ ಕಲ್ಪನೆಯೊಂದಿಗೆ ಇದೇ ಆಗಸ್ಟ್ 25ರಿಂದ 2023ರ ಜನವರಿವರೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಶಾಸಕ ರಘುಪತಿ ಭಟ್ ಮಾತನಾಡಿ, ರಜತ ಮಹೋತ್ಸವ ಕಾರ್ಯಕ್ರಮ ಜಿಲ್ಲೆಯ ಜನರ ಸಹಭಾಗಿತ್ವದಲ್ಲಿ ನಡೆಯಬೇಕು. ಅಂದಿನ ಜನಪ್ರತಿನಿಧಿಗಳು, ಸಂಘ-ಸಂಸ್ಥೆಯ ಪ್ರತಿನಿಧಿಗಳನ್ನು ಸನ್ಮಾನಿಸಬೇಕು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನಡೆಯಲಿರುವ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು. ಅದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಇದೇವೇಳೆ ರಜತ ಮಹೋತ್ಸವ ಕಾರ್ಯಕ್ರಮದ ಸಿದ್ಧತೆಗೆ ಪೂರ್ವಭಾವಿಯಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಎಸ್‌ಪಿ ಸಿದ್ದಲಿಂಗಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT