ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ಅವರು ಶನಿವಾರ (ಮೆ 16) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಬ್ರಹ್ಮಗಿರಿಯ ಬಾಲ ಭವನದಲ್ಲಿ ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್ ಶಂಕುಸ್ಥಾಪನೆ ಕಾರ್ಯಕ್ರಮ, 10 ಗಂಟೆಗೆ ನಗರದ ಮಣಿಪಾಲದ ರಜತಾದ್ರಿಯಾ ಜಿಲ್ಲಾ ಪಂಚಾಯಿತಿಯ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ ಹಾಗೂ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

11 ಗಂಟೆಗೆ ಜಿಲ್ಲಾ ತ್ರೈ ಮಾಸಿಕ ಕೆ.ಡಿ.ಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಮಲ್ಪೆ ಕೊಡವೂರಿನ ಶ್ರೀ ಶಂಕರ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಮಂಗಳೂರಿಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-191523593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.