ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಿ: ಶಾಸಕ ಗುರ್ಮೆ

Published 2 ಜೂನ್ 2023, 13:05 IST
Last Updated 2 ಜೂನ್ 2023, 13:05 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಪುರಸಭಾ ವ್ಯಾಪ್ತಿಯ ಕಡತ ವಿಲೇವಾರಿಗೆ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚಿಸಿದರು.

ಅವರು ಶುಕ್ರವಾರ ಕಾಪು ಪುರಸಭಾ ವ್ಯಾಪ್ತಿಯ ಕುಂದುಕೊರತೆ ಬಗ್ಗೆ ಕಾಪು ಪುರಸಭೆಯ ಸಭಾಂಗಣದಲ್ಲಿ ಪುರಸಭಾ ಸದಸ್ಯರು, ಇಲಾಖಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

‘ಯಾವುದೇ ಕೆಲಸಗಳಿಗೆ ಶೀಘ್ರವಾಗಿ ಸ್ಪಂದಿಸಬೇಕು. ಇಲಾಖಾಧಿಕಾರಿಗಳು ಕ್ಲಪ್ತ ಸಮಯದಲ್ಲಿ ಕಚೇರಿಗೆ ಆಗಮಿಸಬೇಕು. ಯಾವುದೇ ಕಡತಗಳು ವಿಳಂಬವಾಗದೆ ರೀತಿಯಲ್ಲಿ ಸಾರ್ವಜನಿಕರ ಸಮಸ್ಯೆ ಪರಿಹರಿಸಿಕೊಳ್ಳಬೇಕು. ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಆರಂಭಗೊಳ್ಳಲಿದ್ದು, ಈ ಸಂದರ್ಭಗಳಲ್ಲಿ ಆಗಬಹುದಾಗಿದ್ದ ಮುಂಜಾಗ್ರತೆಯನ್ನು ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಪು ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಗ ಸಂತೋಷ್, ನಗರ ಯೋಜಕರಾದ ಅಭಿಲಾಶ್ ಹಾಗೂ ಪುರಸಭೆಯ ಸದಸ್ಯರು, ಪುರಸಭೆಯ ಅಭಿಯಂತರರು, ವಿಷಯ ನಿರ್ವಾಹಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT