ಉಡುಪಿ: ಮಕ್ಕಳು ಇಂದು ಮೊಬೈಲ್ ಫೋನ್ಗಳಿಗೆ ಅತಿಯಾಗಿ ದಾಸರಾಗುತ್ತಿದ್ದು, ಅವರ ನೈಸರ್ಗಿಕ ಬೌದ್ಧಿಕ ಬೆಳವಣಿಗೆ ಕುಂಠಿತವಾಗುತ್ತಿದೆ. ಈ ಸಮಸ್ಯೆಯನ್ನು ಮನಗಂಡು ಮಕ್ಕಳನ್ನು ಮೊಬೈಲ್ ಫೋನ್ ಚಟದಿಂದ ಮುಕ್ತಗೊಳಿಸಲು ಪುತ್ತಿಗೆ ಮಠ ವತಿಯಿಂದ ಮೇ 14ರಿಂದ ಮೊಬೈಲ್ ವರ್ಜನ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.

ಗೀತಾಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 6ರಿಂದ 12 ವರ್ಷ ವಯಸ್ಸಿನೊಳಗಿನ ಮಕ್ಕಳಿಗಾಗಿ ಹಿರಿಯಡಕ ಸಮೀಪದ ಪುತ್ತಿಗೆ ಮೂಲಮಠದ ಪರಿಸರದಲ್ಲಿ ನಾಲ್ಕು ದಿನಗಳ ಶಿಬಿರ ನಡೆಯಲಿದೆ.

ಮೇ 14ರಿಂದ 18ರವರೆಗೆ ನಡೆಯುವ ಶಿಬಿರದಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಬಳಸದಂತೆ ನಿರ್ಬಂಧ ವಿಧಿಸಿ ಅದಕ್ಕೆ ಬದಲಾಗಿ ದೇಸೀ ಕ್ರೀಡೆಗಳು, ಸಾಂಪ್ರದಾಯಿಕ ಆಟಗಳು ಮತ್ತು ಆಧ್ಯಾತ್ಮಿಕ- ಧಾರ್ಮಿಕ ಚಿಂತನೆಯಲ್ಲಿ ತೊಡಗಿಸಲಾಗುತ್ತದೆ. ಮೊಬೈಲ್ ಫೋನ್ ಇಲ್ಲದೆಯೂ ಸಂತೋಷದಿಂದ ಇರಲು ಸಾಧ್ಯವಿದೆ ಎಂಬ ವಾಸ್ತವವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡುವುದು ಈ ಶಿಬಿರದ ಮೂಲ ಉದ್ದೇಶವಾಗಿದೆ ಎಂದರು.

ಸರ್ಕಾರವೂ ಮಕ್ಕಳ ಮೊಬೈಲ್ ಫೋಣ್ ಬಳಕೆ ನಿಷೇಧ ಕುರಿತ ಕಾನೂನು ರೂಪಿಸಲು ಚಿಂತನೆ ನಡೆಸುತ್ತಿರುವ ಕಾರಣಕ್ಕೆ ಅದಕ್ಕೆ ಪೂರಕವಾಗಿ ಈ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಮಕ್ಕಳ ಹೆತ್ತವರು ಮತ್ತು ಪಾಲಕರಿಗೂ ಈ ಕುರಿತು ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಮಕ್ಕಳ ಪೋಷಕರು ಮೇ 10ರೊಳಗಾಗಿ ತಮ್ಮ ಅರ್ಜಿಯನ್ನು ಉಡುಪಿಯ ಗೀತಾ ಮಂದಿರ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಮೇ 14ರಂದು ಬೆಳಿಗ್ಗೆ 10ಕ್ಕೆ ಪುತ್ತಿಗೆ ಮಠದ ನೃಸಿಂಹ ಸಭಾಭವನದಲ್ಲಿ ಶಿಬಿರದ ಉದ್ಘಾಟನೆ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರತೀಶ ತಂತ್ರಿ ಮತ್ತು ರಮೇಶ ಭಟ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-28-231668957

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.