ಉಡುಪಿ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಸರಬರಾಜು ಸ್ಥಗಿತಗೊಂಡಿರುವುದು ಜಿಲ್ಲೆಯಲ್ಲೂ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ನೀಡಿದ್ದು, ಉಡುಪಿ ನಗರ ವ್ಯಾಪ್ತಿಯಲ್ಲಿ ಗುರುವಾರ ಹಲವು ಹೋಟೆಲ್ಗಳು ಬಾಗಿಲು ಮುಚ್ಚಿವೆ.

ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಬಹುತೇಕ ಹೋಟೆಲ್ಗಳು ಬಾಗಿಲು ಮುಚ್ಚಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಹೋಟೆಲ್ ಮಾಲಕರು ತಿಳಿಸಿದ್ದಾರೆ.

ಸಣ್ಣಸಣ್ಣ ಹೋಟೆಲ್, ಫಾಸ್ಟ್ ಫುಡ್ ಸೆಂಟರ್ ನಡೆಸುವವರ ಮೇಲೆ ಹೆಚ್ಚಿನ ಪರಿಣಾಮ ಬೀರಿದ್ದು, ಕೆಲವು ಫಾಸ್ಟ್ ಫುಡ್ ಸೆಂಟರ್ಗಳು ಈಗಾಗಲೇ ಬಾಗಿಲು ಮುಚ್ಚಿವೆ.

‘ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆ ಸ್ಥಗಿತಗೊಂಡಿರುವುದರಿಂದ ಹೋಟೆಲ್ ನಡೆಸುವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಲು ಶುಕ್ರವಾರ ತುರ್ತು ಸಭೆ ಕರೆಯಲಾಗಿದೆ’ ಎಂದು ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.