ಉಡುಪಿ: ನಗರದ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯಿಂದಾಗಿ ರೋಗಿಗಳು ಸಂಕಷ್ಟ ಎದುರಿಸುವಂತಾಗಿದೆ.

ಈ ಆಸ್ಪತ್ರೆಯಲ್ಲಿ ಬೇಸಿಗೆಯಲ್ಲಿ ರೋಗಿಗಳು ಸೆಕೆಯಿಂದ ಬಳಲಿದರೆ, ಪ್ರಸವಪೂರ್ವ ವಾರ್ಡ್ಗಳ ಶೌಚಾಲಯಗಳಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ರೋಗಿಗಳ ಸಂಬಂಧಿಕರು ದೂರಿದ್ದಾರೆ.

ವಿದೇಶಿ ಮಾದರಿಯಲ್ಲಿ ನಿರ್ಮಿಸಿರುವ ಈ ಆಸ್ಪತ್ರೆ ಕಟ್ಟಡದಲ್ಲಿ ಇಲಿ, ಹೆಗ್ಗಣಗಳು ಓಡಾಡುತ್ತಿದ್ದು, ನವಜಾತ ಶಿಶುಗಳ ಸುರಕ್ಷತೆಯ ಬಗ್ಗೆಯೂ ಆತಂಕ ಕಾಡುತ್ತಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯ ವಿವಿಧ ಅಂತಸ್ತುಗಳಲ್ಲಿ ಅಲ್ಲಲ್ಲಿ ಮಳೆ ನೀರು ನಿಂತು ಸೊಳ್ಳೆ ಕಾಟ ಹೆಚ್ಚಿದೆ ಎಂದೂ ಹೇಳಿದ್ದಾರೆ.

ಶಾಸಕರಿಂದ ಪರಿಶೀಲನೆ: ಶಾಸಕ ಯಶ್ಪಾಲ್ ಸುವರ್ಣ ಅವರು ತಾಯಿ ಹಾಗೂ ಮಕ್ಕಳ ಸರ್ಕಾರಿ ಆಸ್ಪತ್ರೆಯ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಬುಧವಾರ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ‘2016 ರಲ್ಲಿ ಕಾರ್ಯಾರಂಭಗೊಂಡ ಈ ಆಸ್ಪತ್ರೆಯು 2022ರಲ್ಲಿ ಸರ್ಕಾರಕ್ಕೆ ಹಸ್ತಾಂತರಗೊಂಡಿದೆ. ಆಸ್ಪತ್ರೆಯ ವಿನ್ಯಾಸ ಉತ್ತಮವಾಗಿದ್ದರೂ ಅದರ ನಿರ್ವಹಣೆಗಾಗಿ ಸರ್ಕಾರ ಹಣ ಒದಗಿಸದೆ ಸಮಸ್ಯೆಯಾಗಿದೆ’ ಎಂದರು.

‘ಈ ಆಸ್ಪತ್ರೆಯಲ್ಲಿ ಆರೋಗ್ಯಪೂರ್ಣವಾದ ವಾತಾವರಣ ಸೃಷ್ಟಿಯಾಗಬೇಕು. ಅದಕ್ಕಾಗಿ ಆಸ್ಪತ್ರೆಯಲ್ಲಿನ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರಲಾಗಿದೆ’ ಎಂದು ಹೇಳಿದರು.

‘ಆಸ್ಪತ್ರೆಯ ಒಳಾಂಗಣ ವಿನ್ಯಾಸದ ಪಿಒಪಿಗಳ ಮಧ್ಯೆ ಇಲಿ, ಹೆಗ್ಗಣಗಳು ಬೀಡು ಬಿಟ್ಟಿವೆ. ತಜ್ಞ ಎಂಜಿನಿಯರ್ಗಳನ್ನು ಕರೆಸಿ ಈ ಸಮಸ್ಯೆ ಪರಿಹರಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.

ಮಕ್ಕಳ ತಜ್ಞ ಡಾ. ಸಂದೀಪ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-89894153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.