ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ ನಗರಸಭೆ: ಪ್ರಭಾಕರ ಪೂಜಾರಿ ಅಧ್ಯಕ್ಷ, ರಜನಿ ಹೆಬ್ಬಾರ್‌ ಉಪಾಧ್ಯಕ್ಷೆ

Published : 23 ಆಗಸ್ಟ್ 2024, 12:18 IST
Last Updated : 23 ಆಗಸ್ಟ್ 2024, 12:18 IST
ಫಾಲೋ ಮಾಡಿ
Comments

ಉಡುಪಿ: ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್‌ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು.

ನಗರಸಭೆಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಮಹೇಶ್‌ಚಂದ್ರ ಅವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಒಟ್ಟು 35 ಸಂಖ್ಯಾಬಲವಿರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್‌ ಮೂವರು ಸದಸ್ಯರನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT