ಉಡುಪಿ: ನಗರದ ಡಾ. ಟಿಎಂಎ ಪೈ ಆಸ್ಪತ್ರೆಯು ಜೂನ್ 1 ರಿಂದ ಕಡೆಕಾರ್ ಸ್ವಾಗತ ಗೋಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕ ನಿರ್ಮಾಣಗೊಂಡಿರುವ ನೂತನ ಕಟ್ಟಡದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಇದೇ 22 ರಿಂದ 24 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನೂತನ ಆಸ್ಪತ್ರೆಗೆ ಸಾರ್ವಜನಿಕರ ಮುಕ್ತ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದರು.

1.4 ಎಕ್ರೆ ಪ್ರದೇಶದಲ್ಲಿರುವ ಹೊಸ ಆಸ್ಪತ್ರೆಯು ಆಧುನಿಕ ವೈದ್ಯಕೀಯ ತಂತ್ರಜ್ಞಾನ ಮತ್ತು ರೋಗಿ ಸ್ನೇಹಿ ಸೌಲಭ್ಯಗಳೊಂದಿಗೆ ವಿನ್ಯಾಸಗೊಂಡಿದೆ. 152 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್, ಮಕ್ಕಳ ವಿಭಾಗ , ಮೂಳೆ ಮತ್ತು ಕೀಲು ವಿಭಾಗ, ಕಿವಿ ಗಂಟಲು ಮೂಗು, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ನೇತ್ರಶಾಸ್ತ್ರ, ಮನೋವೈದ್ಯಶಾಸ್ತ್ರ, ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಾಟಾಲಜಿ ವಿಭಾಗಗಳಿವೆ ಎಂದು ವಿವರಿಸಿದರು.

ಗ್ಯಾಸ್ಟ್ರೋ ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಅರಿವಳಿಕೆ ಶಾಸ್ತ್ರ , ಚರ್ಮಶಾಸ್ತ್ರ, ಔದ್ಯೋಗಿಕ ಚಿಕಿತ್ಸೆ, ರೆಸ್ಪಿರೇಟರಿ ಚಿಕಿತ್ಸೆ, ದಂತವೈದ್ಯಶಾಸ್ತ್ರ, ಫಿಸಿಯೋಥೆರಪಿ, ವಾಕ್ ಮತ್ತು ಶ್ರವಣ ವಿಭಾಗಗಳೂ ಇವೆ. ಅಲ್ಲದೇ ಹೃದ್ರೋಗ, ನರವಿಜ್ಞಾನ, ಮೂತ್ರಪಿಂಡಶಾಸ್ತ್ರ, ಸರ್ಜಿಕಲ್ ಆಂಕೊಲಾಜಿ, ವೈದ್ಯಕೀಯ ಆಂಕೊಲಾಜಿ, ನರಶಸ್ತ್ರಚಿಕಿತ್ಸೆ, ಸಾಂಕ್ರಾಮಿಕ ರೋಗಗಳು, ಮಕ್ಕಳ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ರೆಸ್ಪಿರೇಟರಿ ಮೆಡಿಸಿನ್ ಮತ್ತು ತಜ್ಞರ ಸಮಾಲೋಚನೆಗಳು ಲಭ್ಯವಿರುತ್ತದೆ ಎಂದರು.

ಸುಧಾರಿತ ಲ್ಯಾಪರೊಸ್ಕೋಪಿಕ್ ವ್ಯವಸ್ಥೆಗಳೊಂದಿಗೆ ನಾಲ್ಕು ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳು, ವಿಸ್ತೃತ 25 ಹಾಸಿಗೆಗಳ ಐಸಿಯು ಸೌಲಭ್ಯಗಳು, ಸುಧಾರಿತ ಡಯಾಲಿಸಿಸ್ ಕೇಂದ್ರ, ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್, ಎಕ್ಸ್-ರೇ, ಪ್ರಯೋಗಾಲಯ ಮತ್ತು ಔಷಧಾಲಯ ಸೇವೆಗಳು, ವಿಶೇಷವಾಗಿ ವಿನ್ಯಾಸಗೊಳಿಸಿದ ಆರೋಗ್ಯ ತಪಾಸಣೆ ಸೌಲಭ್ಯಗಳು, ಡೇ ಕೇರ್ ಸೇವೆಗಳು ಮತ್ತು ವಿಶಾಲವಾದ ಪಾರ್ಕಿಂಗ್ ಸ್ಥಳ ಹೊಸ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ವಿವರಿಸಿದರು.

ಉಪ ವೈದ್ಯಕೀಯ ಅಧೀಕ್ಷಕ ಡಾ. ರಾಜಾರಾಮ್ ಪೈ ಮಾತನಾಡಿ, ಕೈಗೆಟುಕುವ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವುದು ಆಸ್ಪತ್ರೆಯ ಪ್ರಾಥಮಿಕ ಉದ್ದೇಶವಾಗಿದೆ ಎಂದು ಹೇಳಿದರು.

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯ ಆಡಳಿತ ಮುಖ್ಯಸ್ಥ ದೀಪಕ್ ಪ್ರಭು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-709128660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.