ಉಡುಪಿ: ಆಧುನಿಕ ಕಾಲದಲ್ಲಿ ಅನುಸರಿಸುವ ಆಹಾರ ಪದ್ಧತಿ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ಎದುರಿಸುತ್ತಿರುವ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ವೈದ್ಯ ಪದ್ಧತಿಯು ಸೂಕ್ತ ಪರಿಹಾರ ಒದಗಿಸುತ್ತಿದ್ದು, ಅದನ್ನು ಹೆಚ್ಚು ಬಳಸುವ ಮೂಲಕ ಇನ್ನಷ್ಟು ಪ್ರಚುರಪಡಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಆಯುರ್ವೇದ ವೈದ್ಯಕೀಯ ಸೌಲಭ್ಯವಿದ್ದು, ಮನುಷ್ಯನ ಶರೀರದಲ್ಲಿರುವ ದೋಷಗಳನ್ನು ತಿಳಿಸಿಕೊಡುವ ಆಯುರ್ವೇದ ಚಿಕಿತ್ಸಾ ಪದ್ಧತಿ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಆಯುಷ್ ಸಚಿವಾಲಯದಿಂದ 2016ರಿಂದ ಪ್ರರಿ ವರ್ಷ ಧನ್ವಂತರಿ ಜಯಂತಿಯಂದು ಆಯುರ್ವೇದ ದಿನವನ್ನು ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಒಂದೊಂದು ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಪೂರ್ವಭಾವಿಯಾಗಿ ಅ. 21ರಿಂದ 25ರ ವರೆಗೆ ನಾರೀ ಸಬಲೀಕರಣ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.

ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಅಧ್ಯಕ್ಷ ಡಾ. ನಾರಾಯಣ್ ಟಿ. ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಡಾ. ಧನೇಶ್ವರಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಡಾ. ನಾಗರಾಜ್, ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ, ಡಾ. ಜಿ.ಶಂಕರ್ ಕಾಲೇಜಿನ ವಿದ್ಯಾರ್ಥಿನಿಯರು ಇದ್ದರು. ಡಾ. ಹೇಮಲತಾ ಸ್ವಾಗತಿಸಿ, ಡಾ. ಸರ್ವೋತ್ತಮ ಶೆಟ್ಟಿ ನಿರೂಪಿಸಿ, ಹಿರಿಯ ವೈದ್ಯಾಧಿಕಾರಿ ಡಾ. ಶ್ಯಾಮರಾವ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.