ಉಡುಪಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಇದೇ 15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಅಧಿಕಾರಿಗಳು ಗುರುವಾರ ಕುಂಜಾರುಗಿರಿಗೆ ಚಾರಣ ನಡೆಸಿದರು.
ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಾಡ್ಲೂರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು .
ಕುಂಜಾರುಗಿರಿಯಲ್ಲಿ ಅಧಿಕಾರಿಗಳು ಮಾನವ ಸರಪಳಿ ರಚಿಸುವ ಮೂಲಕ ಗಮನ ಸೆಳೆದರು.