ಪಡುಬಿದ್ರಿ: ‘ತಂತ್ರಜ್ಞಾನ ಯುಗದಲ್ಲಿ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಬೇಸಿಗೆ ಶಿಬಿರಗಳು ಪ್ರಯೋಜನಕಾರಿ’ ಎಂದು ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ, ರಂಗಕರ್ಮಿ ರಾಮಾಂಜಿ ಉಡುಪಿ ಹೇಳಿದರು.

ಇಲ್ಲಿನ ಓಂಕಾರ್ ಕಲಾ ಸಂಗಮ ಆಯೋಜಿಸಿದ ‘ರಜಾ ಮಜಾ’ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆ ಬೆಳೆಸಲು ಮಹತ್ವದ ಪಾತ್ರ ವಹಿಸುತ್ತವೆ. ಅವರಲ್ಲಿ ಆತ್ಮವಿಶ್ವಾಸ, ತಂಡವಾಗಿ ಕೆಲಸ ಮಾಡುವ ಗುಣ, ನಾಯಕತ್ವ ಸಾಮರ್ಥ್ಯ ಬೆಳೆಸುತ್ತವೆ. ಡಿಜಿಟಲ್ ಸಾಧನಗಳಿಂದ ದೂರವಿದ್ದು ನೈಜ ಅನುಭವ ಪಡೆಯಲು ಸಹಾಯಕ ಎಂದರು.

ಶಿಬಿರಕ್ಕೆ ಚಾಲನೆ ನೀಡಿದ ಬಾಲ ಕಲಾವಿದೆ ಶಾರ್ವರಿ ಭಟ್, ‘ಇಂತಹ ಶಿಬಿರಗಳಿಂದ ನಮ್ಮಲ್ಲಿರುವ ಸುಪ್ತ ಪ್ರತಿಭೆ ಹೊರಹೊಮ್ಮಿಸಲು ಸಾಧ್ಯವಾಗುತ್ತದೆ’ ಎಂದರು. ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಓಂಕಾರ್ ಕಲಾಸಂಗಮದ ಪಾಲುದಾರೆ ಗೀತಾ ಅರುಣ್ ಅಧ್ಯಕ್ಷತೆ ವಹಿಸಿದ್ದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ಸುನಿಲ್ ಕುಮಾರ್, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್, ಸಿಟಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷೆ ಜ್ಯೋತಿ ರಮೇಶ್, ಉದಯ ಕುಮಾರ್ ಭಟ್, ಅರುಣ್ ಕುಮಾರ್ ಭಾಗವಹಿಸಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಹೇಮಲತಾ ವಂದಿಸಿದರು. ದೀಪಾಶ್ರೀ ಕರ್ಕೇರ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-28-1975788838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.