ಉಡುಪಿ: ರೈತರಿಗೆ ಸೋಲಾರ್ ಮೂಲಕ ವಿದ್ಯುತ್ ಒದಗಿಸುವ ಪಿ.ಎಂ. ಕುಸುಮ್ ಯೋಜನೆಯಡಿ ಉಡುಪಿ ಜಿಲ್ಲೆಗೆ 3 ಸೋಲಾರ್ ಘಟಕಗಳು ಮಂಜೂರಾಗಿದ್ದು, ಅರಣ್ಯ ಇಲಾಖೆಯ ಗೊಂದಲದಿಂದ ಯೋಜನೆ ನನೆಗುದಿಗೆ ಬಿದ್ದಿದೆ. ಕೂಡಲೇ ಮಧ್ಯಪ್ರವೇಶಿಸಿ ಯೋಜನೆಯ ತುರ್ತು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಕಂದಾಯ ಇಲಾಖೆ ನಿವೇಶನ ಗುರುತಿಸಿ ಆದೇಶ ಹೊರಡಿ ಸಿದ್ದರೂ ಅರಣ್ಯ ಇಲಾಖೆಯು ಅಲ್ಲಿದ್ದ ಗುಣಮಟ್ಟದ ಮರ ಗಿಡಗಳನ್ನು ತೆರವುಗೊಳಿಸದೇ ಹಠಮಾರಿತನ ಪ್ರದರ್ಶಿಸುತ್ತಿದೆ. ತಕ್ಷಣ ಸಮಸ್ಯೆಯನ್ನು ಬಗೆಹರಿಸಿ ರೈತರ ಒಳಿತಿಗಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಅನುಷ್ಠಾನ ಮಾಡಲು ಈಚೆಗೆ ನಡೆದ ದಿಶಾ ಸಭೆಯಲ್ಲಿ ನಿರ್ಣಯಿಸಿರುವುದನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸುಮಾರು ₹20 ಕೋಟಿ ವೆಚ್ಚದ ಈ ಯೋಜನೆ ಅನುಷ್ಠಾನವಾಗದಿದ್ದರೆ ರೈತಾಪಿ ವರ್ಗಕ್ಕೆ ಅನ್ಯಾಯವಾಗಲಿದೆ. ಯೋಜನೆಗಾಗಿ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ 13 ಎಕರೆ, ಬ್ರಹ್ಮಾವರ ತಾಲ್ಲೂಕಿನ ಕಾವಡಿ ಗ್ರಾಮದಲ್ಲಿ 5 ಎಕರೆ, ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದಲ್ಲಿ 9 ಎಕರೆ ಜಾಗವನ್ನು ಮೀಸಲಿರಿಸಲಾಗಿತ್ತು ಎಂದಿದ್ದಾರೆ.

ಕಂದಾಯ ಇಲಾಖೆ ಜಾಗ ಗುರುತಿಸಿ, ಮೆಸ್ಕಾಂಗೆ ವರ್ಗಾಯಿಸುವ ಮಧ್ಯದಲ್ಲಿ ಅರಣ್ಯ ಇಲಾಖೆಯು ಗೊಂದಲ ನಿರ್ಮಿಸುತ್ತಿದ್ದು, ಸಮಸ್ಯೆಯನ್ನು ಸೃಷ್ಟಿ ಮಾಡಿದೆ. ಕಿರಿಮಂಜೇಶ್ವರ ಮತ್ತು ಬೆಳ್ಳೆ ಗ್ರಾಮದಲ್ಲಿ ಜಾಗ ಸಮತಟ್ಟು ಮಾಡುವ ಮೊದಲು ಅಲ್ಲಿನ ಅಕೇಶಿಯಾ ಗಿಡವನ್ನು ಕಡಿಯಲು ಪಂಚಾಯಿತಿಯಿಂದ ಅರಣ್ಯ ಇಲಾಖೆಗೆ ಪ್ರಸ್ತಾವ ಹೋಗಿದ್ದು, ಅರಣ್ಯ ಇಲಾಖೆ ಅನುಮತಿ ನೀಡಿಲ್ಲ ಎಂದು ಹೇಳಿದ್ದಾರೆ.

ದಿಶಾ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಅವರು ಅದು ಡೀಮ್ಡ್ ಅರಣ್ಯದ ವ್ಯಾಪ್ತಿಯಲ್ಲಿ ಬರುತ್ತಿಲ್ಲ ಎಂದು ಸ್ಪಷ್ಟಪಡಿಸಿದರೂ ಸಮಸ್ಯೆ ಪರಿಹಾರವಾಗದೇ ಅರಣ್ಯ ಇಲಾಖೆಯವರು ವಿನಾ ಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಕ್ಷಣ ಜಿಲ್ಲಾ ಮಟ್ಟದಲ್ಲಿನ ಸಮಿತಿಯನ್ನು ರಚಿಸಿ, ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸ ಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-28-1750610996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.