ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯು ನಗರದ ಮಿಷನ್ ಕಂಪೌಂಡ್ ಬಳಿಯ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಹಿರಿಮೆ ಕರ್ನಾಟಕ ಪೊಲೀಸರಿಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿಯೂ ಉಡುಪಿ ಜಿಲ್ಲೆಯ ಪೊಲೀಸರು ಮೊದಲನೇ ಸ್ಥಾನದಲ್ಲಿ ಇದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು. ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಆರೋಗ್ಯ ರಕ್ಷಣೆ ಯೋಜನೆಯನ್ನು ಪ್ರಾರಂಭಿಸಿದ್ದು, ಯೋಜನೆಯಡಿ ನಿವೃತ್ತ ಪೊಲೀಸ್ ಅಧಿಕಾರಿ / ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಯ ಸಂದರ್ಭದಲ್ಲಿ ₹1.5 ಲಕ್ಷ , ತುರ್ತು ಸಂದರ್ಭದಲ್ಲಿ ₹3 ಲಕ್ಷ ಮಂಜೂರು ಮಾಡಲಾಗುವುದು. ಜಿಲ್ಲೆಯಲ್ಲಿ ಒಟ್ಟು ಮೂವರು ನಿವೃತ್ತ ಸಿಬ್ಬಂದಿ ಈ ಯೋಜನೆಯ ಪ್ರಯೋಜನ ಪಡೆದ್ದಾರೆ ಎಂದು ತಿಳಿಸಿದರು. ಪ್ರತೀ ವರ್ಷ ಸುಮಾರು ₹13 ಲಕ್ಷಕ್ಕೂ ಅಧಿಕ ಮೊತ್ತ ಮಂಜೂರು ಆಗುತ್ತಿದ್ದು, ಇನ್ನೂ ಹೆಚ್ಚಿನ ಮೊತ್ತ ಮಂಜೂರಾತಿಗಾಗಿ ಅನುದಾನದ ಕೊರತೆ ಇದ್ದು, ₹15 ಲಕ್ಷ ಅನುದಾನ ನೀಡುವಂತೆ ಪ್ರಧಾನ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನಿವೃತ್ತರ ಕಲ್ಯಾಣ ಖಾತೆಯಿಂದ ಸುಮಾರು ₹ 13 ಲಕ್ಷದ ವೈದ್ಯಕೀಯ ಧನಸಹಾಯ ನೀಡಲಾಗಿದೆ. ಯಾವುದೇ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿ ಅಹವಾಲುಗಳಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ನಿವೃತ್ತ ಇನ್ಸ್ಪೆಕ್ಟರ್ ಸುಜಾತ ವಿ. ಸಾಲಿಯಾನ್ ಅವರು ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಧ್ವಜ ದಿನಾಚರಣೆಯು ಪೊಲೀಸ್ ಇಲಾಖೆಯ ಮಹತ್ವದ ದಿನವಾಗಿದೆ. ಈ ಧ್ವಜವು ಶಿಸ್ತು, ಕರ್ತವ್ಯ ನಿಷ್ಠೆ, ಕಾನೂನು ಪಾಲನೆ ಹಾಗೂ ರಕ್ಷಣೆಯ ಸಂಕೇತವಾಗಿದೆ ಎಂದರು.

ಪ್ರತೀ ವರ್ಷ ಪೊಲೀಸ್ ಧ್ವಜ ಮಾರಾಟ ಮಾಡಿ ಅದರಿಂದ ಬರುವ ಹಣವನ್ನು ಪೊಲೀಸ್ ಕಲ್ಯಾಣ ನಿಧಿಗೆ ಜಮಾ ಮಾಡುವುದರೊಂದಿಗೆ, ಅದನ್ನು ಸಿಬ್ಬಂದಿಯ ಕಲ್ಯಾಣಕ್ಕಾಗಿ ಬಳಸಲಾಗುತ್ತಿದೆ ಎಂದರು. ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ನಿವೃತ್ತ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು. ಎಎಸ್ಪಿ ಸುಧಾಕರ್ ನಾಯಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-28-1195687982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.