ಶನಿವಾರ, ಡಿಸೆಂಬರ್ 14, 2019
25 °C
ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆದೇಶ

ಪೃಥ್ವಿ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ಖುಲಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ರಾಷ್ಟ್ರೀಯ ಕ್ರೀಡಾಪಟು ಪೃಥ್ವಿ ಪೂಜಾರಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಮಿಸ್ಬಾನ್ ಹುಸೇನ್ ದೋಷಮುಕ್ತ ಎಂದು ಸೋಮವಾರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ: 2011, ಸೆ.27ರಂದು ರಾಷ್ಟ್ರೀಯ ಪೋಲ್‌ವಾಲ್ಟ್‌ ಆಟಗಾರ್ತಿಯಾಗಿದ್ದ ಅಂಪಾರಿನ ಪೃಥ್ವಿ ಪೂಜಾರಿ ವಾರಂಬಳ್ಳಿಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂದರ್ಭ ಸಿಕ್ಕ ಡೆತ್‌ನೋಟ್‌ನಲ್ಲಿ ಬ್ರಹ್ಮಾವರದ ಮಿಸ್ಬಾನ್ ಎಂಬಾತ ಪ್ರೀತಿಸುವಂತೆ ಪೀಡಿಸುತ್ತಿದ್ದ ಎಂದು ಪೃಥ್ವಿ ಉಲ್ಲೇಖಿಸಿದ್ದಳು.

ಬ್ರಹ್ಮಾವರ ಪೊಲೀಸರು ಮಿಸ್ಬಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಈ ಪ್ರಕರಣ ಜಿಲ್ಲೆಯಾದ್ಯಂತ ಸಾಕಷ್ಟು ಸುದ್ದಿಯಾಗಿತ್ತು. ಹಲವು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದ್ದವು.

ಅಂದಿನ ಕುಂದಾಪುರ ಎಎಸ್‌ಪಿ ಡಾ.ಎಚ್‌.ರಾಮ್‌ನಿವಾಸ್ ಸೆಪಟ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. 24 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. 8 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ ಮಿಸ್ಬಾನ್ ವಿರುದ್ಧದ ಆರೋಪವನ್ನು ನ್ಯಾಯಾಲಯ ತಳ್ಳಿಹಾಕಿದ್ದು, ದೋಷಮುಕ್ತಗೊಳಿಸಿದೆ. 

ಆರೋಪಿಯ ಪರವಾಗಿ ವಕೀಲರಾದ ರವಿಕಿರಣ್ ಮುರ್ಡೇಶ್ವರ್ ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)