ಉಡುಪಿ: ಜೂನ್ 28 ರಂದು ನಡೆಯಲಿರುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು ಅಂದಾಜು 63,524 ಮಕ್ಕಳನ್ನು ಗುರುತಿಸಲಾಗಿದ್ದು, ಸಮೀಕ್ಷೆ ಪ್ರಗತಿಯಲ್ಲಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 668 ಲಸಿಕಾ ಕೇಂದ್ರಗಳ ಜೊತೆಯಲ್ಲಿ 18 ಟ್ರಾನ್ಸಿಟ್ ಬೂತ್ಗಳು, 5 ಮೊಬೈಲ್ ತಂಡ, 1,363 ತಂಡಗಳನ್ನು ಹಾಗೂ 155 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಸಾಲಿನ ಡಿಸೆಂಬರ್ನಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 65,401 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ 103 ರಷ್ಟು ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಹೇಳಿದರು.

ದೇಶದಲ್ಲಿ 2011 ರ ಜನವರಿ 13ರಲ್ಲಿ ಕೊನೆಯದಾಗಿ ಪೋಲಿಯೊ ಪ್ರಕರಣ ವರದಿಯಾಗಿದ್ದು ನಂತರ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. 2014 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೊ ಮುಕ್ತ ದೇಶ ಎಂದು ಘೋಷಿಸಿದೆ. ಆದರೂ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನಗಳಲ್ಲಿ ಕೆಲವು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚಿನ ನಿಗಾ ವಹಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಮುಂದುವರಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಪೋಲಿಯೊ ಮತ್ತು ದಡಾರ ನಿರ್ಮೂಲನೆ ಮಾಡುವಲ್ಲಿ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರಬಾರದು. ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಿ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಜ್ಜುಗೊಳಿಸಿ ಇಟ್ಟುಕೊಳ್ಳಬೇಕು. ಲಸಿಕೆಯ ಸುರಕ್ಷಿತ ದಾಸ್ತಾನಿನ ಬಗ್ಗೆ ಗಮನ ಹರಿಸುವುದರೊಂದಿಗೆ ಲಸಿಕೆ ಹಾಳಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-2136906696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.