ಉಡುಪಿ: ಜಿಲ್ಲೆಯಲ್ಲಿ ಮಳೆಗಾಲ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಈಗಾಗಲೇ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಮರಗಳ ಅಪಾಯಕಾರಿ ಕೊಂಬೆಗಳನ್ನು ಕತ್ತರಿಸಲು ಮೆಸ್ಕಾಂನವರಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳನ್ನು ಗುರುತಿಸಲಾಗಿದೆ ಮತ್ತು ಅದನ್ನು ದುರಸ್ತಿ ಮಾಡಲು ಈಗಾಗಲೇ ಸೂಚಿಸಲಾಗಿದೆ ಎಂದರು.

ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾಡಳಿತ ಸಲ್ಲಿಸಿರುವ ಪ್ರಸ್ತಾವನೆಯನ್ನು ಸರ್ಕಾರವು ಪರಿಶೀಲನೆಗಾಗಿ ಚೆನ್ನೈನ ಸಂಸ್ಥೆಯೊಂದಕ್ಕೆ ಕಳುಹಿಸಿದೆ ಎಂದು ಹೇಳಿದರು.

ಮಳೆ ವಿಳಂಬವಾದರೂ ಜಿಲ್ಲೆಯ ಹೆಚ್ಚಿನ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ. ಪೆರ್ಡೂರು ಭಾಗದಲ್ಲಿ ನೀರಿನ ಸಮಸ್ಯೆ ಕಾಡಿದ್ದು, ಅಲ್ಲಿನ ಗ್ರಾಮ ಪಂಚಾಯಿತಿಯವರು ನೀರು ಸರಬರಾಜಿಗೆ ಕ್ರಮ ಕೈಗೊಂಡಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1571093220

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.