ಗುರುವಾರ , ಆಗಸ್ಟ್ 5, 2021
23 °C

ಮಳೆ ಕ್ಷೀಣಿಸಿದರೂ ಕಾಪುವಿನಲ್ಲಿ ಕಡಲ್ಕೊರೆತ ನಿಂತಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಎರಡು ದಿನಗಳಿಂದ ಅಬ್ಬರಿಸಿದ್ದ ಮಳೆ ಭಾನುವಾರ ಕ್ಷೀಣವಾಗಿತ್ತು. ಜಿಲ್ಲೆಯಾದ್ಯಂತ ಸಾಧಾರಣವಾಗಿ ಮಳೆ ಬಿದ್ದಿದೆ. ಆದರೆ, ಕಾಪು ತಾಲ್ಲೂಕಿನಲ್ಲಿ ಕಡಲ್ಕೊರೆತ ಶುರುವಾಗಿದೆ.

ಗಾಳಿ ಮಳೆಗೆ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿರುವುದರಿಂದ ಎರ್ಮಾಳು, ತೆಂಕ, ನಡಿಪಟ್ಣ, ಕಾಡಿಪಟ್ಣ ಹಾಗೂ ಪಡುಬಿದ್ರಿಯಲ್ಲಿ ಕಡಲ್ಕೊರೆತ ಉಂಟಾಗಿದೆ. ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 6.6 ಸೆ.ಮೀ ಮಳೆಯಾಗಿದೆ.

ಯಲ್ಲೊ ಅಲರ್ಟ್‌: ಮುಂದಿನ ಮೂರ್ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಯಲ್ಲೊ ಅಲರ್ಟ್‌ ಘೋಷಿಸಿದೆ.

ಶನಿವಾರ ಸುರಿದ ಭಾರಿ ಮಳೆಗೆ ಬಿದ್ದಿದ್ದ ಮರಳಗಳನ್ನು ಭಾನುವಾರ ಮೆಸ್ಕಾಂ ಸಿಬ್ಬಂದಿ ತೆರವುಗೊಳಿಸಿ, ವಿದ್ಯುತ್ ಕಂಬಗಳನ್ನು ಮರುಸ್ಥಾಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು