ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Udupi Rains | ಜಮೀನು ಜಲಾವೃತ; ಬೋಟ್‌ಗಳ ಮೂಲಕ ರಕ್ಷಣಾ ಕಾರ್ಯಾಚರಣೆ

Published 6 ಜುಲೈ 2023, 4:31 IST
Last Updated 6 ಜುಲೈ 2023, 4:31 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿಮಳೆಗೆ ಕೃಷ್ಣಮಠದ ಪಾರ್ಕಿಂಗ್ ಆಸುಪಾಸಿನಲ್ಲಿರುವ ಬೈಲಕರೆ ಹಾಗೂ ಕಲ್ಸಂಕ ಪ್ರದೇಶದಲ್ಲಿರುವ ಮನೆಗಳು ಮುಳುಗಡೆಯಾಗಿದ್ದು ಅಗ್ನಿಶಾಮಕ ಸಿಬ್ಬಂದಿ ಬೋಟ್‌ಗಳ ಮೂಲಕ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ್ ಕುಮಾರ್, ಸಹಾಯಕ ಅಗ್ನಿಶಾಮಕ ದಳ ಅಧಿಕಾರಿ ಮೀರ್ ಮೊಹ್ಮದ್ ಗೌಸ್ ಹಾಗೂ ಸಿಬ್ಬಂದಿಗಳು ಉಡುಪಿ ಅಗ್ನಿಶಾಮಕ ಠಾಣೆ ಇವರ ನೇತೃತ್ವದಲ್ಲಿ ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಸಲಾಯಿತು.

ಮೂಡನಿಡಂಬೂರು, ಮಠದಬೆಟ್ಟು, ಬೈಲಕೆರೆ ಭಾಗಗಳಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಕಾಲುವೆ, ತೋಡುಗಳು ತುಂಬಿ ಹರಿಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT