ಉಡುಪಿ: ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ 2,950 ಅನರ್ಹ ಪಡಿತರ ಚೀಟಿಗಳು ಪತ್ತೆಯಾಗಿದ್ದು, ಅದರಲ್ಲಿ 2,739 ಅನ್ನು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸಲಾಗಿದೆ. ಬಾಕಿ ಉಳಿದ 211 ಪಡಿತರ ಚೀಟಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಲು ಕಟ್ಟುನಿಟ್ಟಿನ ಕ್ರಮ ವಹಿಸುವುದರೊಂದಿಗೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಅನರ್ಹ ಪಡಿತರ ಚೀಟಿದಾರರು ಪತ್ತೆಯಾದಲ್ಲಿ ಅಂಥವರ ಪಡಿತರ ಚೀಟಿಗಳನ್ನು ಸರ್ಕಾರದ ಮಾನದಂಡಗಳ ಅನ್ವಯ ಎಪಿಎಲ್ಗೆ ಪರಿವರ್ತಿಸಲು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಪಡಿತರ ಅಕ್ಕಿಯನ್ನು ಅಕ್ರಮ ದಾಸ್ತಾನು ಅಥವಾ ಮಾರಾಟ ಮಾಡುತ್ತಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 295 ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, 1,95,058 ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳಿವೆ, ಒಟ್ಟು 8,31,846 ಫಲಾನುಭವಿಗಳಿದ್ದಾರೆ. ಪಡಿತರ ವಿತರಣೆಯಲ್ಲಿ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಯು ಮೂರನೇ ಸ್ಥಾನದಲ್ಲಿದೆ. ಸೆಪ್ಟೆಂಬರ್ ತಿಂಗಳಲ್ಲಿ 40375.45 ಕ್ವಿಂಟಲ್ ಅಕ್ಕಿ ವಿತರಣೆ ಮಾಡುವುದರೊಂದಿಗೆ ಶೇ 78.42 ಪ್ರಗತಿ ಸಾಧಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಇ ಕೆವೈಸಿ ಕಾರ್ಯ ಶೇ 99.30 ರಷ್ಟು ಪೂರ್ಣಗೊಂಡಿದೆ. ಮನೆ ಮನೆಗೆ ಭೇಟಿ ನೀಡಿ ಇ ಕೆವೈಸಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆಯಡಿ 9 ಪ್ರಕರಣಗಳು ದಾಖಲಾಗಿ 200.95 ಕ್ವಿಂಟಾಲ್ ಅಕ್ಕಿಯನ್ನು ಹಾಗೂ 3 ವಾಹನಗಳನ್ನು ವಶಪಡಿಸಿಕೊಂದು ₹2 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಅಂಗಡಿಗಳು, ಮಾಲ್, ಪೆಟ್ರೋಲ್ ಪಂಪ್ಗಳಲ್ಲಿ ತೂಕ ಮತ್ತು ಅಳತೆಯ ತಪಾಸಣೆಯನ್ನು ನಿರಂತರವಾಗಿ ಕೈಗೊಳ್ಳಬೇಕು ಎಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಯಾವುದೇ ಗ್ರಾಹಕರಿಗೆ ತೊಂದರೆ ಆಗದಂತೆ ಪ್ರತಿಯೊಂದು ಅಂಗಡಿಗಳನ್ನು ತಪಾಸಣೆ ನಡೆಸಿ ಮೋಸ ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ರಶ್ಮಿ, ದ.ಕ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಕಾನೂನು ಮಾಪನ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

‘13947 ಅರ್ಜಿ ಸಲ್ಲಿಕೆ’

ಜಿಲ್ಲೆಯಲ್ಲಿ ಆದ್ಯತಾ ಪಡಿತರ ಚೀಟಿಗೆ 13947 ಅರ್ಜಿಗಳು ಸಲ್ಲಿಕೆಯಾಗಿದ್ದು ಅದರಲ್ಲಿ 13412 ಅರ್ಜಿಗಳನ್ನು ವಿಲೇವಾರಿ ಮಾಡಿ 535 ಅರ್ಜಿಗಳು ಬಾಕಿ ಇವೆ. ಆದ್ಯತೇತರ ಪಡಿತರ ಚೀಟಿಗೆ 12332 ಅರ್ಜಿಗಳು ಸಲ್ಲಿಕೆಯಾಗಿ 10294 ಅರ್ಜಿಗಳನ್ನು ವಿಲೇವಾರಿ ಮಾಡಿ 2038 ಅರ್ಜಿಗಳ ವಿಲೇವಾರಿಗೆ ಬಾಕಿ ಇದ್ದು ಅವುಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೆ.ಎಚ್. ಮುನಿಯಪ್ಪ ಸೂಚಿಸಿದರು.

ಗ್ರಾಹಕರ ಹಿತರಕ್ಷಣೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಗ್ರಾಹಕರು ದಿನನಿತ್ಯದ ವ್ಯವಹಾರಗಳಲ್ಲಿ ಮೋಸ ಹೋಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು
-ಕೆ.ಎಚ್. ಮುನಿಯಪ್ಪ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.