ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಯಮ್ಮ ದೇಗುಲ ಕಾಮಗಾರಿ ವೀಕ್ಷಿಸಿದ ರವಿಶಂಕರ್ ಗುರೂಜಿ

Published 20 ಫೆಬ್ರುವರಿ 2024, 15:27 IST
Last Updated 20 ಫೆಬ್ರುವರಿ 2024, 15:27 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ದಕ್ಷಿಣ ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ನಿರ್ಮಾಣಗೊಳ್ಳುತ್ತಿರುವ ಇಳಕಲ್‌ ಕೆಂಪು ಶಿಲೆಯ ದೇಗುಲದ ಕಾಮಗಾರಿ ವೀಕ್ಷಿಸಿ, ಇದು ಬರಿ ಕಲ್ಲಲ್ಲ ಭಕ್ತಿ–ಭಾವದ ಸಂಕೇತ ಎಂದು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥೆ ಮುಖ್ಯಸ್ಥ ರವಿಶಂಕರ್ ಗುರೂಜಿ ಅಭಿಪ್ರಾಯಪಟ್ಟರು.

ಮಂಗಳವಾರ ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲರೂ ಸೇರಿ ಹೃದಯದಿಂದ ಕೆಲಸ ಮಾಡಿದರೆ ದೇವಿಯ ಅನುಗ್ರಹ ಪ್ರಾಪ್ತವಾಗುತ್ತದೆ. ದಿನನಿತ್ಯ ಇಲ್ಲಿ ಚಮತ್ಕಾರಗಳು ನಡೆಯುತ್ತಿದ್ದು, ಭಕ್ತರ ಇಷ್ಟಾರ್ಥಗಳು ನೆರವೇರುತ್ತಿವೆ. ಆದ್ದರಿಂದ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಗೊಂಡು ಜನರಿಗೆ ಅರೋಗ್ಯ ಮತ್ತು ಮನಸಿನಲ್ಲಿ ಉತ್ಸಾಹ ಉಂಟಾಗಲಿ ಎಂದು ಹಾರೈಸಿದರು.

ಶಾಸಕ, ದೇವಳ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರ ಸಮ್ಮುಖದಲ್ಲಿ ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅವರಿಂದ ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಲಾಲಾಜಿ ಆರ್.ಮೆಂಡನ್, ಅನಿಲ್ ಬಲ್ಲಾಳ್ ಕಾಪು ಬೀಡು, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ ಎಸ್.ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ಚಂದ್ರಶೇಖರ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ, ಬಾಬು ಮಲ್ಲಾರ್, ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT