ಉಡುಪಿ: ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ, ವರ್ಷಕ್ಕೆ ಒಂದು ಬಾರಿ ಮಾಸ್ಟರ್ ಹೆಲ್ತ್ ಚೆಕ್ ಅಪ್ ಮಾಡಿಸಬೇಕು ಎಂದರು.

ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಿಸಿಕೊಂಡು ಕೆಲಸ ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್ ಹಾಗೂ ಚಾಲಕರಿಗೆ ಸಕಾಲದಲ್ಲಿ ವೇತನ ಪಾವತಿಸಿರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಪಾವತಿ, ಸಾಮಾಜಿಕ ಭದ್ರತೆ ಒದಗಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು ಎಂದರು.

ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯ ನಿರ್ವಹಿಸುವಾಗ ತಪ್ಪದೆ ಸುರಕ್ಷತಾ ಪರಿಕರಗಳನ್ನು ಧರಿಸಬೇಕು ಎಂದು ಹೇಳಿದರು.

ಪೌರಕಾರ್ಮಿಕರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಈ ಯೋಜನೆಯನ್ನು ಮಾಡಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎಎಸ್ಪಿ ಸುಧಾಕರ ನಾಯಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಸಮಿತಿಯ ಸದಸ್ಯರಾದ ಪ್ರಶಾಂತಿ, ನಾಗರಾಜ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-28-1707388435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.