ಬ್ರಹ್ಮಾವರ: ‘ಬೇರೆ ಬೇರೆ ಊರುಗಳಲ್ಲಿ ಬದುಕು ಕಟ್ಟಿಕೊಂಡ ಸಾಲಿಕೇರಿ ಯುವಕರ ತಂಡ ವರ್ಷಕ್ಕೊಮ್ಮೆ ತಮ್ಮ ಹುಟ್ಟೂರಿಗೆ ಬಂದು, ಇಡೀ ಸಮಾಜ ವನ್ನು ಒಂದುಗೂಡಿಸಿ ಮನರಂಜನಾ ಕ್ರೀಡಾಕೂಟ ಆಯೋಜಿಸುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ’ ಎಂದು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಬಿರ್ತಿ ಹೇಳಿದರು.

ಸಾಲಿಕೇರಿಯ ಫ್ರೆಂಡ್ಸ್ ಕ್ಲಬ್ ವತಿಯಿಂದ ‘ಬಾಂಧವ್ಯ- 2026’ ಶೀರ್ಷಿಕೆಯಡಿ ಸಾಲಿಕೇರಿ ಬ್ರಹ್ಮಲಿಂಗ ವೀರಭದ್ರ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ವಿವಿಧ ಮನರಂಜನಾ ಕ್ರೀಡಾಕೂಟದ ಸಮಾರೋಪದಲ್ಲಿ ಅವರು ಮಾತನಾಡಿದರು.

ದಿನಪೂರ್ತಿ ನಡೆದ ಈ ಸಂಭ್ರಮದಲ್ಲಿ ಮಹಿಳೆಯರಿಗಾಗಿ ಮೆಹೆಂದಿ, ಫೋಟೋ ಹಂಟ್, ಫ್ಯಾನ್ಸಿ ಡ್ರೆಸ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪುರುಷರಿಗಾಗಿ ಐಪಿಎಲ್ ಮಾದರಿಯ ಕ್ರಿಕೆಟ್ ಪಂದ್ಯಾಟ ಹಾಗೂ ಟ್ರೆಷರ್ ಹಂಟ್, ಮಕ್ಕಳಿಗಾಗಿ ಚಿತ್ರಕಲೆ ಮತ್ತು ಕ್ವಿಜ್ ಸ್ಪರ್ಧೆ ಜರುಗಿದವು.

ಕಾರ್ಯಕ್ರಮದಲ್ಲಿ ಅಶಕ್ತರಿಗೆ ವೈದ್ಯಕೀಯ ಸಹಾಯಧನ ವಿತರಿಸಲಾಯಿತು. ಅಲ್ಲದೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಾಲಿಕೇರಿ ದೇವಳದ ಆಡಳಿತ ಮೊಕ್ತೇಸರ ಸುರೇಶ್ ಶೆಟ್ಟಿಗಾರ್, ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷ ರವಿ ಶೆಟ್ಟಿಗಾರ್ ಕಾರ್ಕಳ, ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ, ಬಸ್ರೂರು ನೇಕಾರರ ಪ್ರಾಥಮಿಕ ಸಹಕಾರಿ ಸಂಘದ ನಿರ್ದೇಶಕ ರಾಜೇಂದ್ರ ಶೆಟ್ಟಿಗಾರ್ ಬಸ್ರೂರು ಭಾಗವಹಿಸಿದ್ದರು. ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ವಿಷ್ಣುಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-2081978160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.