ಉಡುಪಿ: ಅಂಗವಿಕಲ ಮಕ್ಕಳ ಬೆಳವಣಿಗೆ, ಮನೋರಂಜನೆ ಹಾಗೂ ಅವರ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ವಿಕಲಚೇತನರಿಗೆ ಸಮಗ್ರ ಪುನರ್ವಸತಿ, ಚಿಕಿತ್ಸಕ ಸೇವೆಗಳು, ಉದ್ಯೋಗವಾಕಾಶ ಮತ್ತು ಸ್ವತಂತ್ರ ಜೀವನಕ್ಕೆ ಸಾಮರ್ಥ್ಯ ವೃದ್ಧಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಾಮರ್ಥ್ಯ ಟ್ರಸ್ಟ್ ರಚಿಸಲಾಗಿದೆ. ₹1.50 ಕೋಟಿ ಸರ್ಕಾರಿ ಅನುದಾನ ಮತ್ತು ಇತರ ಸಂಘ- ಸಂಸ್ಥೆಗಳ ನೆರವಿನಲ್ಲಿ ಒಟ್ಟು ₹4.90 ಕೋಟಿ ವೆಚ್ಚದಲ್ಲಿ ವಿಶಿಷ್ಟ ರೀತಿಯ ಪಾರ್ಕ್ ನಿರ್ಮಾಣವಾಗಲಿದೆ.

ಉಡುಪಿ ಜಿಲ್ಲೆಯಲ್ಲಿ 15 ವರ್ಷ ಒಳಗಿನ 1,228 ಅಂಗವಿಕಲ ಮಕ್ಕಳಿದ್ದು ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲು ಪಾರ್ಕ್ ಅನುಕೂಲವಾಗಲಿದೆ. ಅಲ್ಲದೇ ಅದರಲ್ಲಿ ಥೆರಪಿ ಸ್ವಿಂಗ್ಸ್ಗಳು, ಬ್ಯಾಲನ್ಸ್ ಬೀಮ್ಸ್ಗಳು, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ ಆಟದ ವಲಯಗಳು ಇರಲಿದೆ. ಹೂಗಳ ಸುವಾಸನೆ ವೈವಿಧ್ಯ ಅರಿಯಲು ಸೆನ್ಸೇಶನ್ ಸೆನ್ಸರಿ ಪಾರ್ಕ್ ಕೂಡ ಬರಲಿದೆ.

ಪಾರ್ಕ್ಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ನಾಲ್ಕು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಯೋಜನೆ ಹಾಕಿದ್ದಾರೆ. ಆದರೆ ಎರಡೇ ವರ್ಷದಲ್ಲಿ ಕಾಮಗಾರಿ ಪೂರ್ತಿಗೊಳಿಸಿ ನಮ್ಮ ಅವಧಿಯಲ್ಲೇ ಉದ್ಘಾಟನೆ ಮಾಡುವಂತಾಗಬೇಕು. ನಮ್ಮ ಇಲಾಖೆಯಿಂದಲೂ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಮನೋವೈದ್ಯ ಡಾ. ಪಿ.ವಿ. ಭಂಡಾರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-28-757957017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.