ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಅಂಬಲಪಾಡಿ, ಕಡೆಕಾರು, ಉದ್ಯಾವರ ಗ್ರಾಮ ಸಂಪರ್ಕಿಸುವ ಬಂಕೇರಕಟ್ಟ ಸೇತುವೆಯಿಂದ ಸಂಪಿಗೆ ನಗರದ ವರೆಗಿನ ಸುಮಾರು ₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಮುಖ್ಯ ರಸ್ತೆಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಉದ್ಯಾವರ ಭಾಗದಿಂದ ರಾಷ್ಟ್ರೀಯ ಹೆದ್ದಾರಿಗೆ ಪರ್ಯಾಯವಾಗಿ ಮಲ್ಪೆಯನ್ನು ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸುವುದರಿಂದ ದಿನಂಪ್ರತಿ ಸಂಚರಿಸುವ ಸಾವಿರಾರು ಜನರಿಗೆ ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಇತರ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದ್ದೇವೆ ಎಂದು ಹೇಳಿದರು.

ಮುಖಂಡರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಜಗದೀಶ್ ಆಚಾರ್ಯ ಕಪ್ಪೆಟ್ಟು, ವೆಂಕಟರಮಣ ಕಿದಿಯೂರು, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಅಮೀನ್, ಅಶೋಕ್ ಪಾಲನ್, ಪ್ರಶಾಂತ್ ಸಾಲ್ಯಾನ್, ಜಯಕರ್ ಸನಿಲ್, ರಾಜೇಂದ್ರ ಪಂದುಬೆಟ್ಟು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-1455704479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.