ಉಡುಪಿ: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಪ್ರಥಮ ಪರ್ಯಾಯ ಆರಂಭಿಸಿದರು.

ಪರ್ಯಾಯ ಪೂಜಾಧಿಕಾರವನ್ನು ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಶೀರೂರು ಶ್ರೀಗಳಿಗೆ ಹಸ್ತಾಂತರಿಸಿದರು. ಮುಂದಿನ ಎರಡು ವರ್ಷಗಳು ವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣನ ಪೂಜೆ ಮಾಡಲಿದ್ದಾರೆ.

ನಗರದ ಜೋಡುಕಟ್ಟೆಯಿಂದ ಅದ್ದೂರಿ ಮೆರವಣಿಗೆಯ ಮೂಲಕ ಕೃಷ್ಣಮಠ ಪ್ರವೇಶಿಸಿದ ಶೀರೂರು ಶ್ರೀಗಳನ್ನು ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸ್ವಾಗತಿಸಿದರು.

ಶ್ರೀಕೃಷ್ಣ ದೇವರ ನೈರ್ಮಲ್ಯ ವಿಸರ್ಜನಾ ಪೂಜಾದಿಗಳನ್ನು ಮುಗಿಸಿದ ಪುತ್ತಿಗೆ ಉಭಯ ಶ್ರೀಪಾದರು, ವೇದವರ್ಧನತೀರ್ಥ ಶ್ರೀಪಾದರಿಗೆ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿಸಿದರು.

ಬಳಿಕ ಚಂದ್ರಶಾಲೆಯಲ್ಲಿ ಶ್ರೀಗಂಧ ಲೇಪನಮಾಡಿ, ಮಧ್ವಾಚಾರ್ಯರ ಸನ್ನಿಧಿಯಲ್ಲಿ ಅಕ್ಷಯಪಾತ್ರೆ ಹಾಗೂ ಬೆಳ್ಳಿಯ ಸಟ್ಟುಗವನ್ನು ಹಸ್ತಾಂತರಿಸಿ, ಸರ್ವಜ್ಞ ಪೀಠದಲ್ಲಿ ಕೂರಿಸಿ ಶುಭ ಹಾರೈಸಿದರು. ಈ ವೇಳೆ ಮೈಸೂರು–ಕೊಡಗು ಕ್ಷೇತ್ರದ ಸಂಸದ, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಇದ್ದರು.

ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದ ಶೀರೂರು ಶ್ರೀಗಳು, ಇತರ ಮಠಾಧೀಶರೊಂದಿಗೆ ಅರಳು ಗದ್ದಿಗೆ ಸಾಂಪ್ರದಾಯಿಕ ದರ್ಬಾರ್ ನಡೆಸಿದರು.

ಬಳಿಕ ದರ್ಬಾರ್ನಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ಹಿರಿಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠದ ವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಫಲಿಮಾರು ಮಠದ ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.

ದರ್ಬಾರ್ ಮುಗಿದ ಬಳಿಕ ಶೀರೂರು ಶ್ರೀಗಳು ಪ್ರಥಮ ಪರ್ಯಾಯದ ಮೊದಲ ಕೃಷ್ಣ ಪೂಜೆ ನೆರವೇರಿಸಿದರು. ನೂರಾರು ಭಕ್ತರು ಅದಕ್ಕೆ ಸಾಕ್ಷಿಯಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.