ಉಡುಪಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಗಳು ಎಚ್ಚರ ವಹಿಸಬೇಕು. ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕೇಂದ್ರವನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆಯ ಷರತ್ತುಗಳನ್ನು ಪೂರ್ಣ ಪ್ರಮಾಣದಲ್ಲಿ ಪಾಲನೆ ಮಾಡಿದ್ದಲ್ಲಿ ಮಾತ್ರ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಕಾಯ್ದೆ ಅನ್ವಯ ಕಾರ್ಯ ನಿರ್ವಹಿಸುವ ರೇಡಿಯಾಲಜಿಸ್ಟ್ ವೈದ್ಯರ ವಿವರಗಳನ್ನು ತಪ್ಪದೇ ಪ್ರದರ್ಶಿಸಬೇಕು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರ್ಕಾರದ ಅನುಮತಿ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ನಿಯಮಾನುಸಾರ ಅಗತ್ಯ ರಿಜಿಸ್ಟರ್ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು ಎಂದರು.ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಯಂತ್ರಗಳ ಬದಲಾವಣೆ ಮಾಡುವುದು ಅಥವಾ ರೇಡಿಯಾಲಜಿಸ್ಟ್ ವೈದ್ಯರನ್ನು ಬದಲಾವಣೆ ಮಾಡುವಾಗ ಜಿಲ್ಲಾ ಮಟ್ಟದ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯಬೇಕು. ಪಡೆಯದಿದ್ದರೆ ಅವರ ಮೇಲೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂದರು.

ರೋಗಿಗಳು ತಪಾಸಣೆಗಾಗಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ಬಂದಂತಹ ಸಂದರ್ಭದಲ್ಲಿ ವೈದ್ಯರ ಆಯ್ಕೆಗೆ ಅನುಕೂಲ ಮಾಡಿಕೊಡುವುದರ ಜೊತೆಗೆ ಗಂಟೆಗಟ್ಟಲೇ ಕಾಯಿಸದೇ ತಪಾಸಣೆಗಳನ್ನು ಅಲ್ಪ ಕಾಲದಲ್ಲಿಯೇ ನಡೆಸುವಂತಾಗಬೇಕು ಎಂದರು.

ಪಿ.ಸಿ.ಪಿ.ಎನ್.ಡಿ.ಟಿ. ಜಿಲ್ಲಾ ಪರಿಶೀಲನಾ ಮತ್ತು ತಪಾಸಣಾ ಸಮಿತಿ ಸದಸ್ಯರು ಮೂರು ತಿಂಗಳೊಳಗಾಗಿ ಜಿಲ್ಲೆಯ ಎಲ್ಲಾ ನೋಂದಾಯಿತ ಸ್ಕ್ಯಾನಿಂಗ್ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡುವುದರೊಂದಿಗೆ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ಅನುಷ್ಠಾನದಲ್ಲಿ ಯಾವುದೇ ನ್ಯೂನತೆಗಳು ಕಂಡು ಬಂದಲ್ಲಿ ಅಂತಹ ಕೇಂದ್ರಗಳ ಹಾಗೂ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಅಧಿಕಾರಿಗಳ ಪರಿಶೀಲನಾ ಸಮಿತಿಯು 2025ರ ಸೆಪ್ಟೆಂಬರ್ನಿಂದ ಏಪ್ರಿಲ್ 2026ರ ವರೆಗೆ ಉಡುಪಿಯ 120, ಕುಂದಾಪುರದ 94 ಹಾಗೂ ಕಾರ್ಕಳದ 120 ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಅಗ್ನಿ ನಿರೋಧಕ ಸಾಧನಗಳು ಇಲ್ಲದೇ ಇರುವ ಬಗ್ಗೆ ಹಾಗೂ ಕೆಪಿಎಂಇ ನಿಯಮಾವಳಿಗಳನ್ನು ಪಾಲಿಸದೇ ಇರುವ ಕಾರಣ ಕ್ರಮವಾಗಿ 102, 248 ಹಾಗೂ 65 ಆರೋಗ್ಯ ಸಂಸ್ಥೆಗಳಿಗೆ ನೋಟಿಸ್ ನೀಡಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮ್ ರಾವ್ ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ತಾಲ್ಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-28-3703351

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.