ಭಾನುವಾರ, ನವೆಂಬರ್ 27, 2022
26 °C

ಸರ್ಕಾರಿ ಶಾಲೆ ಉಳಿಸಿ: ನಿರಂಜನಾರಾಧ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬ್ರಹ್ಮಾವರ: ‘ಸರ್ಕಾರಿ ಶಾಲೆಗಳು ಸಂವಿ ಧಾನದ ತೊಟ್ಟಿಲುಗಳು’ ಎಂದು ಡಾ. ನಿರಂಜನಾರಾಧ್ಯ ಹೇಳಿದರು.

ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಈಚೆಗೆ ನಡೆದ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಬ್ರಹ್ಮಾವರ ತಾಲ್ಲೂಕು ಮಟ್ಟದ ಸದಸ್ಯರಿಗಾಗಿ ನಡೆದ ಸಾಮರ್ಥ್ಯ ವರ್ಧನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಎಸ್‌ಡಿಎಂಸಿಗಳ ಪಾತ್ರ ಮುಖ್ಯ. ಸರ್ಕಾರಿ ಶಾಲೆಗಳನ್ನು ಕಳೆದುಕೊಂಡರೆ ಭವಿಷ್ಯ ಮತ್ತು ಭರವಸೆ ಕಳೆದುಕೊಂಡಂತೆ ಎಂದು ಅವರು ಹೇಳಿದರು.

ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಅಧ್ಯಕ್ಷ ಮೊಯ್ದಿನ್ ಕುಟ್ಟಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಬ್ರಹ್ಮಾವರ ಸ್ಪೋರ್ಟ್ಸ್‌ ಕ್ಲಭ್ ಅಧ್ಯಕ್ಷ ಚಂದ್ರಶೇಖರ ಹೆಗ್ಡೆ, ಚೇತನ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಭರತ್ ಶೆಟ್ಟಿ, ಎಸ್‌ಡಿಎಂಸಿ ಜಿಲ್ಲಾ ಉಪಾಧ್ಯಕ್ಷೆ ಉಷಾ ರಮೇಶ್, ಕಾರ್ಯದರ್ಶಿ ದೀಪಾ ಮಹೇಶ್, ಮಾರ್ಗದರ್ಶಕಿ ಮಲ್ಲಿಕಾ ಬಿ ಪೂಜಾರಿ, ಬೈಂದೂರು ತಾಲ್ಲೂಕು ಘಟಕದ ಕಾರ್ಯದರ್ಶಿ ಜ್ಯೋತಿ ಜಯರಾಮ ಶೆಟ್ಟಿ, ಕುಂದಾಪುರ ತಾಲ್ಲೂಕು ಘಟಕದ ಕಾರ್ಯದರ್ಶಿ ಪ್ರಮೋದಾ ಕುಶಲ ಶೆಟ್ಟಿ ಇದ್ದರು.

ಬ್ರಹ್ಮಾವರ ತಾಲ್ಲೂಕು ಘಟಕದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸ್ವಾಗತಿಸಿದರು. ಕುಂದಾಪುರ ತಾಲ್ಲೂಕು ಅಧ್ಯಕ್ಷ ಎಸ್.ವಿ. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು