ಉಡುಪಿ: ಜಿಲ್ಲೆಯ ವಿವಿಧೆಡೆ ಹೆದ್ದಾರಿ ಕಾಮಗಾರಿ ಇನ್ನೂ ದಡಮುಟ್ಟದಿರುವುದರ ನಡುವೆಯೇ ಸರ್ವಿಸ್ ರಸ್ತೆಗಳ ಅವ್ಯವಸ್ಥೆ ಮುಂದುವರಿದಿದ್ದು, ವಾಹನ ಸವಾರರನ್ನು ಹೈರಾಣ ಮಾಡುತ್ತಿವೆ.

ಹಲವು ವರ್ಷಗಳಿಂದ ನಡೆಯುತ್ತಿರುವ ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಮಲ್ಪೆಯಿಂದ ಕರಾವಳಿ ಬೈಪಾಸ್ವರೆಗಿನ ಹೆದ್ದಾರಿ ದುರಸ್ತಿ ಕಾಮಗಾರಿ ಆಮೆಗತಿಯಲ್ಲೇ ಸಾಗುತ್ತಿದೆ. ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ವೇಗವಾಗಿ ನಡೆಯುತ್ತಿದ್ದರೂ ಸರ್ವಿಸ್ ರಸ್ತೆ ವಿಸ್ತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ಅಂಬಲಪಾಡಿಯಲ್ಲಿ ಸರ್ವಿಸ್ ರಸ್ತೆಯನ್ನು ವಿಸ್ತರಣೆ ಮಾಡಬೇಕೆಂಬ ಬೇಡಿಕೆಯನ್ನು ಹಲವು ವರ್ಷಗಳಿಂದಲೂ ಜನರು ಮುಂದಿಡುತ್ತಿದ್ದಾರೆ. ಇದೀಗ ಅಂಬಲಪಾಡಿ ಬೈಪಾಸ್ನಲ್ಲಿ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕಾಮಗಾರಿ ಮುಗಿಯುವ ಮೊದಲೇ ಸರ್ವಿಸ್ ರಸ್ತೆಯನ್ನು ವಿಸ್ತರಣೆ ಮಾಡಿ, ಅಭಿವೃದ್ಧಿಪಡಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಮೇಲ್ಸೆತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹೆದ್ದಾರಿಯ ವಾಹನಗಳು ಅಗಲಕಿರಿದಾದ ಸರ್ವಿಸ್ ರಸ್ತೆಯಲ್ಲೇ ಸಂಚರಿಸುತ್ತಿವೆ. ಜೊತೆಗೆ ಕೆಲವೆಡೆ ಸರ್ವಿಸ್ ರಸ್ತೆಯ ಡಾಂಬರು ಕಿತ್ತು ಹೋಗಿ ಅಪಾಯ ಆಹ್ವಾನಿಸುತ್ತಿದೆ. ಸರ್ವಿಸ್ ರಸ್ತೆಯ ಹೊಂಡ ಮುಚ್ಚುವ ಕೆಲಸಕ್ಕೂ ಸಂಬಂಧಪಟ್ಟವರು ಮುಂದಾಗಿಲ್ಲ ಎನ್ನುತ್ತಾರೆ ಸ್ಥಳೀಯರು.

ಕಿನ್ನಿಮುಲ್ಕಿಯಿಂದ ಕರಾವಳಿ ಬೈಪಾಸ್ವರೆಗಿನ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್ ರಸ್ತೆಗಳ ಬದಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿದು ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಮಳೆಗಾಲಕ್ಕೂ ಮೊದಲು ಚರಂಡಿ ವ್ಯವಸ್ಥೆ ಸಹಿತ ಈ ಸರ್ವಿಸ್ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೂರಕ ಮಾಹಿತಿ: ಶೇಷಗಿರಿ ಭಟ್, ವಾಸುದೇವ ಭಟ್, ಹಮೀದ್ ಪಡುಬಿದ್ರಿ, ಪ್ರಕಾಶ ಸುವರ್ಣ ಕಟಪಾಡಿ

ಅಂಬಲಪಾಡಿಯಲ್ಲಿ ಸರ್ವಿಸ್ ರಸ್ತೆ ವಿಸ್ತರಣೆ ಮಾಡಬೇಕು. ಸರ್ವಿಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಇತರರಿಗೆ ಸಮಸ್ಯೆ ಉಂಟುಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು

–ಗಣೇಶ್ರಾಜ್ ಸರಳಬೆಟ್ಟು ಸಾಮಾಜಿಕ ಕಾರ್ಯಕರ್ತ

ವಾಹನ ನಿಲುಗಡೆ ತಾಣವಾದ ಸರ್ವಿಸ್ ರಸ್ತೆ

ಬ್ರಹ್ಮಾವರ: ಬ್ರಹ್ಮಾವರ ಸಾಲಿಗ್ರಾಮ ಸಾಸ್ತಾನ ಕೋಟ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸಮಸ್ಯೆಗಳು ಇನ್ನೂ ಹಾಗೆಯೇ ಉಳಿದುಕೊಂಡಿವೆ. ಈ ಹಿಂದೆ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಸಮೀಪ ಸಂಭವಿಸಿದ್ದ ಅಪಘಾತಗಳ ಬಳಿಕ ಪ್ರತಿಭಟನೆಗಳು ತೀವ್ರಗೊಂಡು ಸರ್ವೀಸ್ ರಸ್ತೆ ಕಾಮಗಾರಿಗೆ ಬೇಡಿಕೆ ಇಟ್ಟು ಕೆಲವು ಭಾಗದಲ್ಲಿ ಸರ್ವಿಸ್ ರಸ್ತೆಯ ಕಾಮಗಾರಿ ಮುಗಿದಿದೆ. ಆದರೆ ಸರ್ವಿಸ್ ರಸ್ತೆ ವಾಹನಗಳ ನಿಲುಗಡೆಯ ತಾಣವಾಗಿ ಮಾರ್ಪಾಡಾಗಿದೆ. ಸರ್ವಿಸ್ ರಸ್ತೆಗಳು ಸಮೀಪದ ವಾಣಿಜ್ಯ ಸಂಸ್ಥೆಗಳ ಗ್ರಾಹಕರ ಮತ್ತು ಸಾರ್ವಜನಿಕರ ಪಾರ್ಕಿಂಗ್ ಜಾಗವಾಗಿ ಬದಲಾಗಿವೆ. ಬ್ರಹ್ಮಾವರದಿಂದ ಉಡುಪಿಗೆ ಸಾಗುವ ಮಾರ್ಗದ ವಿರುದ್ಧ ದಿಕ್ಕಿನಲ್ಲಿ ಹಲವು ಕಾಲೇಜುಗಳಿವೆ. ಸಾವಿರಾರು ವಿದ್ಯಾರ್ಥಿಗಳು ಅಲ್ಲಿ ಕಲಿಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆ ದಾಟಿಯೇ ಹೋಗಬೇಕಾಗಿದೆ. ಈ ಕಾರಣಕ್ಕೆ ಮಹೇಶ ಆಸ್ಪತ್ರೆ ಎಸ್.ಎಂ.ಎಸ್ ಕಾಲೇಜು ಬಳಿ ಸಿಗ್ನಲ್ ಅಳವಡಿಸುವುದರಿಂದ ಮುಂದಾಗುವ ಅನಾಹುತಗಳನ್ನು ಸ್ವಲ್ಪವಾದರೂ ಕಡಿಮೆ ಮಾಡಬಹುದು ಎನ್ನುತ್ತಾರೆ ಶಾಲಾ ಕಾಲೇಜಿನ ಮುಖ್ಯಸ್ಥರು. ಸಾಲಿಗ್ರಾಮ ಮತ್ತು ಕೋಟ ಭಾಗದಲ್ಲೂ ಈಗಾಗಲೇ ಆಗಿರುವ ಸರ್ವಿಸ್ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ಬ್ರಹ್ಮಾವರ ಬಸ್ ನಿಲ್ದಾಣದ ಸಮೀಪ ಮತ್ತು ಹೊಸದಾಗಿ ನಿರ್ಮಿಸಲಾದ ಸರ್ವಿಸ್ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡದಂತೆ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸಬೇಕು. ಸಾಲಿಗ್ರಾಮ ಪೇಟೆಯಿಂದ ಎಡಬೆಟ್ಟುವರೆಗಿನ ಸರ್ವಿಸ್ ರಸ್ತೆ ಕಾಮಗಾರಿಗೆ ಚುರುಕು ಮುಟ್ಟಿಸಿ ಕೂಡಲೇ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಪೂರ್ಣ ಕಾಮಗಾರಿ: ಅಪಘಾತಗಳಿಗೆ ಆಹ್ವಾನ

ಕಾರ್ಕಳ: ತಾಲ್ಲೂಕಿನ ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ– 169ರ ರಸ್ತೆ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು ಸರ್ವಿಸ್ ರಸ್ತೆಗಳ ಅರೆ ಬರೆ ಕಾಮಗಾರಿಗಳಿಂದ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸರ್ವಿಸ್ ರಸ್ತೆಯಿಲ್ಲದೆ ಗ್ರಾಮದ ಅಡ್ಡ ರಸ್ತೆಗಳಿಂದ ಪ್ರಯಾಣಿಕರು ವಾಹನ ಸವಾರರು ನೇರವಾಗಿ ರಾಷ್ಟ್ರೀಯ ಹೆದ್ದಾರಿಗೆ ರಸ್ತೆಗೆ ಪ್ರವೇಶಿಸುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಸಾಣೂರು ಗ್ರಾಮದಲ್ಲಿ ಸುಮಾರು 2 ಕಿ.ಮೀ.ನಷ್ಟು ಸರ್ವಿಸ್ ರಸ್ತೆ ಅಗತ್ಯವಾಗಿ ನಿರ್ಮಾಣವಾಗಬೇಕಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

‘ಮಳೆಗಾಲದೊಳಗೆ ಪೂರ್ಣ’

ಅಂಬಲಪಾಡಿ ಮೇಲ್ಸೇತುವೆ ಮತ್ತು ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿಗಳು ಮಳೆಗಾಲದೊಳಗೆ ಪೂರ್ಣಗೊಳ್ಳಲಿದೆ. ಹೆಜಮಾಡಿಯಿಂದ ಕುಂದಾಪುರದವರೆಗೆ ಪೂರ್ಣ ಪ್ರಮಾಣದಲ್ಲಿ ಸರ್ವಿಸ್ ರಸ್ತೆಗಳು ನಿರ್ಮಾಣವಾದರೆ ಅಪಘಾತಗಳು ಕಡಿಮೆಯಾಗಲಿವೆ. ಬ್ರಹ್ಮಾವರ ಉಚ್ಚಿಲಕ್ಕೆ ಹೊಸ ಮೇಲ್ಸೇತುವೆಗಳು ಮಂಜೂರಾಗಿವೆ. ಬ್ರಹ್ಮಾವರ ತೆಕ್ಕಟ್ಟೆ ಸೇರಿದಂತೆ ಈ ಹಿಂದೆ ಆರಂಭಿಸಲಾದ ಸರ್ವಿಸ್ ರಸ್ತೆ ಕಾಮಗಾರಿಗಳು ಶೇ 70ರಷ್ಟು ಪೂರ್ಣಗೊಂಡಿವೆ. ಮತ್ತೆ 24 ಕಿ.ಮೀ.ಯಷ್ಟು ಹೊಸ ಸರ್ವಿಸ್ ರಸ್ತೆ ಮಂಜೂರಾಗಿದೆ. ಈಗ ನಡೆಯುತ್ತಿರುವ ಸರ್ವಿಸ್ ರಸ್ತೆಗಳ ಕಾಮಗಾರಿ ಮುಗಿದ ಕೂಡಲೇ ಹೊಸ ಸರ್ವಿಸ್ ರಸ್ತೆಗಳ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

‘ಕೆಲವೆಡೆ ಮಾತ್ರ ಸರ್ವಿಸ್ ರಸ್ತೆ’

ಪಡುಬಿದ್ರಿ: ಹೆಜಮಾಡಿಯಿಂದ ಕಾಪುವರೆಗೆ ಕೆಲವು ಭಾಗಗಳಲ್ಲಿ ಮಾತ್ರ ಸರ್ವಿಸ್ ರಸ್ತೆ ನಿರ್ಮಾಣವಾಗಿದ್ದು ಇನ್ನು ಕೆಲವು ಪ್ರಮುಖ ಸ್ಥಳಗಳಲ್ಲಿ ಸರ್ವೀಸ್ ರಸ್ತೆ ಇಲ್ಲದೇ ಇರುವುದರಿಂದ ಸ್ಥಳೀಯರು ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಪಡುಬಿದ್ರಿಗೆ ಸಂಚರಿಸುವವರಿಗೆ ಸರ್ವಿಸ್ ರಸ್ತೆ ಇಲ್ಲದಿರುವುದು ಅಪಾಯಕಾರಿಯಾಗಿದೆ. ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುವ ವಾಹನಗಳ ನಡುವೆ ಸ್ಥಳೀಯ ವಾಹನ ಚಾಲಕರು ಶಾಲಾ ಮಕ್ಕಳು ಅಂಗಡಿ ಮಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎನ್ನುತ್ತಾರೆ ಜನರು.

‘ಸಮರ್ಪಕ ಸರ್ವಿಸ್ ರಸ್ತೆಗೆ ಒತ್ತಾಯ’

ಶಿರ್ವ: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಬಲಾಯಿಪಾದೆ ಸಮೀಪ ಹೆದ್ದಾರಿಯ ಇಕ್ಕೆಲಗಳಲ್ಲಿ ಸಮರ್ಪಕವಾಗಿ ಸರ್ವಿಸ್ ರಸ್ತೆಗಳಿಲ್ಲದೆ ಸಮಸ್ಯೆಯಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕಚ್ಚಾ ರಸ್ತೆಗೆ ಅವಕಾಶ ಕಲ್ಪಿಸಿದ್ದರೂ ಈ ಭಾಗದಲ್ಲಿ ಸರ್ವಿಸ್ ರಸ್ತೆ ನಿರ್ಮಾಣಗೊಂಡಿಲ್ಲ. ಕೊರಂಗ್ರಪಾಡಿಯಿಂದ ಉಡುಪಿಗೆ ಬರುವ ಮತ್ತು ಉದ್ಯಾವರ ಒಳದಾರಿಯಿಂದ ಉಡುಪಿಗೆ ಬರುವ ವಾಹನಗಳು ಒನ್ ವೇ ಮೂಲಕ ಬರುವುದರಿಂದ ತೊಂದರೆಯಾಗುತ್ತಿದೆ ಎಂದು ಜನರು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.