ಬೈಂದೂರು: ‘ಸಮಾಜ ಉದ್ಧಾರವಾಗಲು ಅಲ್ಲಿ ಆಚಾರ, ವಿಚಾರ, ದೇವರು, ಧರ್ಮ ಇರಬೇಕು ಎನ್ನುವುದು ತತ್ವಸಿದ್ಧಾಂತ. ನಮ್ಮ ಪೂರ್ವಜರು ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಉದ್ದೇಶದಿಂದ ಮಠ, ಮಂದಿರಗಳನ್ನು ನಿರ್ಮಾಣ ಮಾಡಿದ್ದು ಅವುಗಳನ್ನು ಉಳಿಸಿ ಬೆಳೆಸಬೇಕು’ ಎಂದು ಶೃಂಗೇರಿ ಶಾರದಾ ಪೀಠಾಧೀಶ ವಿಧುಶೇಖರ ಭಾರತೀತೀರ್ಥ ಸ್ವಾಮೀಜಿ ಹೇಳಿದರು.

ಉಪ್ಪುಂದ ಭದ್ರಕಾಳಿ ಮತ್ತು ಭೂತರಾಯ ದೇವಸ್ಥಾನದ 16ನೇ ವರ್ಧಂತ್ಯುತ್ಸವ, ಕೋಟಿ ಕುಂಕುಮಾರ್ಚನೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ದೇವಾಲಯಗಳು ಸಗುಣೋಪಾಸನೆ ಮಾಡುವ ಪವಿತ್ರ ಸ್ಥಳ. ಅರ್ಚಕರು ವೇದ ಮಂತ್ರಗಳಿಂದ ನಿಯಮಾನುಸಾರ ಸಾತ್ವಿಕ ಕಾರ್ಯಗಳನ್ನು ನಡೆಸಬೇಕು. ದೇವಾಲಯಗಳಲ್ಲಿ ನಡೆಯುವ ಕರ್ಮಕ್ಕೆ ವಿಶೇಷ ಫಲ ದೊರಕುತತದೆ. ಅಚಲವಾದ ನಂಬಿಕೆಯಿಂದ ಪ್ರಾರ್ಥಿಸಿದರೆ ದೇವರ ಪರಿಪೂರ್ಣ ಅನುಗ್ರಹವಾಗುತ್ತದೆ ಎಂದರು.

ಆನಗಳ್ಳಿ ಚೆನ್ನಕೇಶವ ಗಾಯತ್ರಿ ಭಟ್, ಶಿರಾಲಿ ವೆಂಕಟಾಪುರ ರಾಮಚಂದ್ರ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಶೃಂಗೇರಿ ಮಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ್ ಅಡಿಗ ಬಡಾಕೆರೆ ಧಾರ್ಮಿಕ ಕಾರ್ಯ ನಿರ್ವಹಿಸಿದರು. ಶಾಸಕ ಗುರುರಾಜ್ ಗಂಟೆಹೊಳೆ, ಮುಖಂಡ ಕೆ. ಗೋಪಾಲ ಪೂಜಾರಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಪ್ರವರ್ತಕ ಡಾ.ಗೋವಿಂದ ಬಾಬು ಪೂಜಾರಿ, ಜಿ.ಪಂ. ಮಾಜಿ ಸದಸ್ಯರಾದ ಎಸ್. ಮದನ್ ಕುಮಾರ್, ಗೌರಿ ದೇವಾಡಿಗ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಮೀನುಗಾರರ ಒಕ್ಕೂಟ ಅಧ್ಯಕ್ಷ ಕುಮಾರ್ ಖಾರ್ವಿ, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಖಾರ್ವಿ, ಉಪಾಧ್ಯಕ್ಷ ಶೇಖರ ಪೂಜಾರಿ ಭಾಗವಹಿಸಿದ್ದರು. ರವಿ ಉಪ್ಪುಂದ ಸ್ವಾಗತಿಸಿದರು. ಆಚಾರ್ಯ ಕೇಶವ ಬೆಳ್ಳಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-185006222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.