ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ | ಪತ್ತೆಯಾಗದ ಸೋಂಕಿನ ಮೂಲ: ಆತಂಕ

Last Updated 10 ಜೂನ್ 2020, 15:27 IST
ಅಕ್ಷರ ಗಾತ್ರ

ಉಡುಪಿ:ಜಿಲ್ಲೆಯಲ್ಲಿ ಈಚೆಗೆ ಲ್ಯಾಬ್‌ ಟೆಕ್ನಿಷನ್‌ವೊಬ್ಬರಿಗೆ ಕೋವಿಡ್‌–19 ‌ಸೋಂಕು ಕಾಣಿಸಿಕೊಂಡಿದ್ದು, ಅವರ ಸೋಂಕಿನ ಮೂಲ ಇನ್ನೂ ಪತ್ತೆಯಾಗದಿರುವುದು ಆತಂಕ ಮೂಡಿಸಿದೆ.

ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್‌, ಲ್ಯಾಬ್‌ ಟೆಕ್ನಿಷಿಯನ್‌ಗೆ ಸೋಂಕು ಯಾರಿಂದ ತಗುಲಿದೆ, ಹೇಗೆ ತಗುಲಿದೆಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಬುಧವಾರ ಶೂನ್ಯ ಪ್ರಕರಣ:

ಜಿಲ್ಲೆಯಲ್ಲಿ ಬುಧವಾರ ಯಾವುದೇ ಕೋವಿಡ್‌–19 ಸೋಂಕಿತ ಪ್ರಕರಣಗಳು ದೃಢಪಟ್ಟಿಲ್ಲ. 2 ದಿನಗಳಿಂದಲೂ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ಪತ್ತೆಯಾಗದಿರುವುದು ಸ್ವಲ್ಪ ನಿರಾಳ ಮೂಡಿಸಿದೆ.

459ಮಂದಿ ಬಿಡುಗಡೆ:

ಜಿಲ್ಲೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದು ಇದುವರೆಗೂ459 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ486 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT