ಉಡುಪಿ: ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಜಿಲ್ಲಾ ಪೊಲೀಸ್ ವತಿಯಿಂದ ವಿವಿಧೆಡೆ ಅಳವಡಿಸಿದ್ದ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭಗೊಂಡಿದೆ.

ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರು ಕಡೆಗಳಲ್ಲಿ ಅತ್ಯಾಧುನಿಕ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಸಲಾಗಿದೆ.

ಈ ಕ್ಯಾಮೆರಾದ ಮೂಲಕ ವಾಹನಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿಯಿಂದ ನಿರೀಕ್ಷಿಸಿ, ನಿಯಮ ಉಲ್ಲಂಘನೆ ಮಾಡಿದವರಿಗೆ ಸಂಬಂಧಿಸಿದ ಚಲನ್ಗಳನ್ನು ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಕಾರ್ಕಳದ ದೂಪದ ಕಟ್ಟೆ, ಪಡುಬಿದ್ರಿಯ ಉಚ್ಚಿಲ, ಕಾಪುವಿನ ದಂಡ ತೀರ್ಥ, ಕೋಟದ ತೆಕ್ಕಟ್ಟೆ, ಗಂಗೊಳ್ಳಿಯ ತ್ರಾಸಿ, ಬೈಂದೂರಿನ ನಾಯಕನ ಕಟ್ಟೆಯಲ್ಲಿ ಈ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಕಾರ್ಕಳದ ದೂಪದಕಟ್ಟೆಯಲ್ಲಿ ವೇಗ ಮಿತಿ ಗಂಟೆಗೆ 60 ಕಿ.ಮೀ. ಹಾಗೂ ಉಳಿದೆಡೆ ವೇಗ ಮಿತಿ ಗಂಟೆಗೆ 80 ಕಿ.ಮೀ. ಆಗಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ಬೀಳಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳಿಗೆ ಅನುಸಾರವಾಗಿ ವೇಗದ ಮಿತಿಯನ್ನು ಅನ್ವಯಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಅತಿವೇಗದ ಚಾಲನೆ, ಟ್ರಿಪಲ್ ರೈಡಿಂಗ್, ಸೀಟ್ ಬೆಲ್ಟ್ ಧರಿಸದಿರುವುದು, ಹೆಲ್ಮೆಟ್ ಧರಿಸದಿರುವುದು, ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು, ತಪ್ಪು ದಿಕ್ಕಿನಲ್ಲಿ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಯನ್ನು ಈ ಕ್ಯಾಮೆರಾ ಪತ್ತೆ ಮಾಡಲಿದೆ.

ಚಲನ್ ಸ್ವೀಕರಿಸಿ ಏಳು ದಿನದೊಳಗೆ ಉಡುಪಿ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಯಲ್ಲಿ ದಂಡ ಪಾವತಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-653838620

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.